"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Thursday 22 January 2015

440 ಗೆಜೆಟೆಡ್‌ ಹುದ್ದೆಗಳಿಗೆ ಕೆಪಿಎಸ್‌ಸಿ ಅಧಿಸೂಚನೆ
Thu, 01/22/2015 - 01:00

 ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ‘ಎ’ ಮತ್ತು ‘ಬಿ’ ಶ್ರೇಣಿಯ 440 ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ­ಗಾಗಿ ಬುಧವಾರ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್‌ 19ರಂದು ಪೂರ್ವಭಾವಿ ಪರೀಕ್ಷೆ ನಡೆಯ­ಲಿದೆ. ಆನ್‌ಲೈನ್‌ ಮೂಲಕ ಫೆಬ್ರುವರಿ 20ರ ರಾತ್ರಿ 11.45ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಮನೋಜ್‌ ಕುಮಾರ್‌ ಮೀನಾ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಶುಲ್ಕ: ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ–1ರ  ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರಿಗೆ ₨ 25 ಹಾಗೂ ಇತರರಿಗೆ ₨ 300 ಪರೀಕ್ಷಾ ಶುಲ್ಕ ನಿಗದಿ ಪಡಿಸಲಾಗಿದೆ. ಶುಲ್ಕ ಪಾವತಿಗೆ ಫೆಬ್ರುವರಿ 21 ಕಡೇ ದಿನ. ಅಭ್ಯರ್ಥಿಗಳು ರಾಜ್ಯದಲ್ಲಿರುವ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಮಾತ್ರ ಶುಲ್ಕ ಪಾವತಿಸಬಹುದು.

ವಯೋಮಿತಿ: ಸಾಮಾನ್ಯ ವರ್ಗಕ್ಕೆ ಸೇರಿದ ಕನಿಷ್ಠ 21ರಿಂದ ಗರಿಷ್ಠ 35 ವರ್ಷ ವಯಸ್ಸಿನ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅರ್ಹರು. 2ಎ/2ಬಿ/3ಎ/3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷ. ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ–1ಕ್ಕೆ ಸೇರಿದ ಗರಿಷ್ಠ 40 ವರ್ಷ ವಯಸ್ಸಿನ ಅಭ್ಯರ್ಥಿಗಳು ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

ಮಾಜಿ ಸೈನಿಕರಿಗೆ ನಿಯಮಾನುಸಾರ ವಯೋ­ಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಅಂಗ­ವಿ­ಕಲರು ಮತ್ತು ವಿಧವೆಯರಿಗೆ 10 ವರ್ಷಗಳ ಸಡಿಲಿಕೆ ಇದೆ. ಕಳೆದ ಡಿಸೆಂಬರ್‌ 5ರಂದು ಸರ್ಕಾರ ಹೊರಡಿ­ಸಿರುವ ಆದೇಶದ ಅನ್ವಯ, ನಿಯಮಗಳ ಅನುಸಾರ ಅರ್ಹತೆ ಹೊಂದಿರುವ ಎಲ್ಲ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ ಎಂದು ಮೀನಾ ತಿಳಿಸಿದ್ದಾರೆ. ವಿವರಗಳಿಗೆ ಆಯೋಗದ ವೆಬ್‌ಸೈಟ್‌ಗೆ (http://kpsc.kar.nic.in/) ಭೇಟಿ ನೀಡಬಹುದು.

No comments:

Post a Comment