"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Saturday 7 February 2015

☀ವಿಶ್ವದ ಎರಡನೆಯ ಅತಿ ದೊಡ್ಡ ಮಾನವ ನಿರ್ಮಿತ ಗುಂಬಜ್ ಗೋಲ ಗುಮ್ಮಟ (Gol Gumbaz) ದ ಕುರಿತು ವರ್ಣಿಸಿರಿ. (250 ಶಬ್ಧಗಳಲ್ಲಿ)

☀ವಿಶ್ವದ ಎರಡನೆಯ ಅತಿ ದೊಡ್ಡ ಮಾನವ ನಿರ್ಮಿತ ಗುಂಬಜ್ ಗೋಲ ಗುಮ್ಮಟ (Gol Gumbaz) ದ ಕುರಿತು ವರ್ಣಿಸಿರಿ.
(250 ಶಬ್ಧಗಳಲ್ಲಿ)


♦ ಇದು ಮಹಮದ್ ಆದಿಲ್ ಶಾ (ಆಳ್ವಿಕೆ: 1627-1657)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು 1659ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ 50 ಮೀ , ಹೊರಗಡೆ ಎತ್ತರ 198 ಅಡಿ ಮತ್ತು ಒಳಗಡೆ ಎತ್ತರ 175 ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ 39 ಮೀ (124ಅಡಿ) ವ್ಯಾಸ ಹೊಂದಿದೆ.ಅದರಂತೆ 8 ಅಂತಸ್ತುಗಳಿವೆ. ಇದು ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್ (ಇಟಲಿಯ ರೋಮ್ ನಗರದ ಬೆಸಿಲಿಕಾ ಚರ್ಚ್ – ವಿಶ್ವದ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್).

ಇದರ ವಿಶೇಷ ಆಕರ್ಷಣೆಯೆಂದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ ಏಳು ಬಾರಿ ಪ್ರತಿಧ್ವನಿತವಾಗುತ್ತದೆ! ಹಾಗೆಯೆ ಇಲ್ಲಿರುವ “ಪಿಸುಗುಟ್ಟುವ ಶಾಲೆ”ಯಲ್ಲಿ ಅತಿ ಸಣ್ಣ ಶಬ್ದವೂ 37 ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಇದರ ಹತ್ತಿರ ಬಿಜಾಪುರ ಆದಿಲ್ ಶಾಹಿಗಳಿಗೆ ಸಂಭದಿಸಿದ ವಸ್ತು ಸಂಗ್ರಾಹಾಲಯವು ಇದೆ.

ಗೋಲ ಗುಮ್ಮಟ ಬಿಜಾಪುರದಲ್ಲಿ ಸ್ಥಿತವಾಗಿರುವ ಮೊಹಮ್ಮದ್ ಆದಿಲ್ ಶಾ (1627 – 1657) ಅವರ ಸಮಾಧಿ. ಗೋಲ್ ಗುಂಬಜ್ ಬಿಜಾಪುರದ ಅತ್ಯಂತ ಆಕರ್ಷಕವಾದ ಸ್ಮಾರಕ. ಅದರ ಕಟ್ಟುವಿಕೆಯ ಹೊಣೆ ಹೊತ್ತವನು, ದಾಬುಲ್ ನ ಪ್ರಸಿದ್ಧ ವಾಸ್ತುಶಿಲ್ಪಯಾದ ಯಾಕುಬ್. ಗೋಲ್ ಗುಂಬಜ್ ನ ತಳಹದಿಯು 205 ಅಡಿಗಳ ಚಚ್ಚೌಕ. ಅದರ ಸುತ್ತಲೂ ಇರುವ ಗೋಡೆಗಳು 198 ಅಡಿ ಎತ್ತರವಾಗಿವೆ. ಈ ಗೋಡೆಗಳ ಮೇಲೆ ಗುಂಬಜವು ಕಣ್ಣಿಗೆ ಕಾಣುವ ಯಾವುದೇ ಆಸರೆಯೂ ಇಲ್ಲದೆ ನಿಂತಿದೆ. ಗೋಡೆಗಳಿಂದ ಸುತ್ತುವರಿಯಲ್ಪಟ್ಟ ಮತ್ತು ಗುಂಬಜದ ಕೆಳಗಿರುವ ವಿಶಾಲವಾದ ಹಾಲಿನ(ಹಾಲ್) ವಿಸ್ತೀರ್ಣವು 1833767 ಚದುರಡಿಗಳು.

ಗೋಲ್ ಗುಂಬಜ್, ಜಗತ್ತಿನಲ್ಲಿರುವ ಅತ್ಯಂತ ದೊಡ್ಡ ಸಿಂಗಲ್ ಛೇಂಬರ್ ಸ್ಟ್ರಕ್ಚರ್ ಗಳಲ್ಲಿ ಒಂದು. ಇಲ್ಲಿರುವ ಗೋಡೆಗಳಲ್ಲಿ ಪ್ರತಿಯೊಂದರಲ್ಲಿಯೂ ಮೂರು ಕಮಾನುಗಳನ್ನು ರಚಿಸಲಾಗಿದೆ. ಗೋಲ್ ಗುಂಬಜ್ ನ ಮಧ್ಯದಲ್ಲಿರುವ ಗೋಳಾಕೃತಿಯ ಶಿಖರವು ಯಾವುದೇ ಕಂಬ ಅಥವಾ ರಚನೆಯನ್ನು ಆಧರಿಸಿ ನಿಂತಿಲ್ಲ. ರೋಮ್ ನಗರದಲ್ಲಿರುವ ಸೈಂಟ್ ಪೀಟರ್ ಬ್ಯಾಸಿಲಿಕಾದ ಡೋಮನ್ನು ಹೊರತುಪಡಿಸಿದರೆ, ಇದು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದು. ಈ ಡೋಮ್ ನಿಂತಿರುವುದು ಪೆಂಡಾಂಟಿವ್ ಎಂಬ ತತ್ವದ ಮೇಲೆ. ಪರಸ್ಪರ ಕ್ರಾಸ್ ಆಗುವ ಕಮಾನುಗಳ ವ್ಯವಸ್ಥೆಯೇ ಈ ಡೋಮಿಗೆ ಆಧಾರವಾಗಿರುತ್ತದೆ.

ಭಾರತದಲ್ಲಿ ಬೇರೆಲ್ಲಿಯೂ ಈ ಬಗೆಯ ರಚನೆಯಿಲ್ಲ.ಗುಂಬಜಿನ ಗೋಡೆಗಳ ಹೊರ ಭಾಗದ ಮೇಲೆ ಪಾರಿವಾಳಗಳು, ಆನೆಗಳು, ಕಮಲದಳಗಳು, ಮತ್ತು ಕಂಠಹಾರಗಳ ಸುಂದರವಾದ ಕೆತ್ತನೆ ಹಾಗೂ ಶಿಲ್ಪಗಳನ್ನು ನೋಡಬಹುದು. ಹಾಲಿನ ಮಧ್ಯದಲ್ಲಿರುವ ವೇದಿಕೆಯ ಮೇಲೆ, ಮುಹಮ್ಮದ್ ಆದಿಲ್ ಷಾ ಮತ್ತು ಅವನ ಬಂಧುಗಳ ಕೃತಕವಾದ ಸಮಾಧಿಗಳಿವೆ. ನಿಜವಾದ ಸಮಾಧಿಗಳು ನೆಲಮಾಳಿಗೆಯಲ್ಲಿ ಸುರಕ್ಷಿತವಾಗಿವೆ.

4 comments: