☀ ಹಳೆಗನ್ನಡ ಸಾಹಿತ್ಯ:
(Old Kannada Literature)
━━━━━━━━━━━━━━━━━━━━━━━━━━━━━━━━━━━━━━━━━━━━━
♦.ಹಳೆಗನ್ನಡ ಸಾಹಿತ್ಯ:
(Old Kannada Literature)
— ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹತ್ತನೇ ಶತಮಾನದಿಂದ ಸುಮಾರು ಹನ್ನೆರಡನೇ ಶತಮಾನದ ವರೆಗಿನ ಕಾಲಘಟ್ಟವನ್ನು ಹಳೆಗನ್ನಡ ಎಂದು ಗುರುತಿಸಬಹುದು. ಈ ಕಾಲದ ಸಾಹಿತ್ಯ ಮುಖ್ಯವಾಗಿ ಜೈನ ಧರ್ಮವನ್ನು ಅವಲಂಬಿಸಿದೆ.
— ಕನ್ನಡ ಚರಿತ್ರೆಯ ಈ ಘಟ್ಟಕ್ಕೆ ಆದಿ-ಕಾವ್ಯ ಎಂದೂ ಸಹ ಕರೆಯಬಹುದು.
●.ಈ ಕಾಲದ ಅತಿ ಪ್ರಸಿದ್ಧ ಕವಿಯೆಂದರೆ ಪಂಪ (ಕ್ರಿ.ಶ. ೯೦೨-೯೭೫). ಪಂಪನ ವಿಕ್ರಮಾರ್ಜುನ ವಿಜಯ ಅಥವಾ ಪಂಪ ಭಾರತ ಇಂದಿಗೂ ಮೇರು ಕೃತಿಯೆಂದು ಪರಿಗಣಿತವಾಗಿದೆ.
●.ಪಂಪ ಭಾರತ ಮತ್ತು ತನ್ನ ಇನ್ನೊಂದು ಮುಖ್ಯಕೃತಿಯಾದ ಆದಿಪುರಾಣದ ಮೂಲಕ ಪಂಪ ಕನ್ನಡ ಕಾವ್ಯಪರಂಪರೆಯ ದಿಗ್ಗಜರಲ್ಲಿ ಒಬ್ಬನಾಗಿದ್ದಾನೆ.
— ಪಂಪ ಭಾರತ ಸಂಸ್ಕೃತ ಮಹಾಭಾರತದ ಕನ್ನಡ ರೂಪಾಂತರ.
— ತನ್ನ ಮಾನವತಾವಾದ ಹಾಗೂ ಗಂಭೀರ ಲೇಖನಶೈಲಿಯ ಮೂಲಕ ಕನ್ನಡದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾಗಿದ್ದಾನೆ.
●.ಇದೇ ಕಾಲದ ಇನ್ನೊಬ್ಬ ಪ್ರಮುಖ ಲೇಖಕನೆಂದರೆ ಶಾಂತಿನಾಥ ಪುರಾಣವನ್ನು ರಚಿಸಿದ ಪೊನ್ನ (೯೩೯-೯೬೬).
●.ಈ ಕಾಲದ ಮತ್ತೊಬ್ಬ ಹೆಸರಾಂತ ಕವಿ ರನ್ನ (೯೪೯-?).
●.ರನ್ನನ ಪ್ರಮುಖ ಕೃತಿಗಳು
—ಜೈನ ಧರ್ಮೀಯವಾದ ಅಜಿತ ತೀರ್ಥಂಕರ ಪುರಾಣ ಮತ್ತು ಗದಾಯುದ್ಧಂ ಅಥವಾ ಸಾಹಸಭೀಮ ವಿಜಯ.
—ಇದು ಇಡೀ ಮಹಾಭಾರತದ ಒಂದು ಸಿಂಹಾವಲೋಕನ ದೃಷ್ಟಿ.
—ಮಹಾಭಾರತ ಯುದ್ಧದ ಕೊನೆಯ ದಿನದಲ್ಲಿ ಸ್ಥಿತವಾಗಿದ್ದರೂ ಸಿಂಹಾವಲೋಕನ ಕ್ರಮದಲ್ಲಿ ಇಡಿಯ ಮಹಾಭಾರತವನ್ನು ಪರಿಶೀಲಿಸುತ್ತದೆ.
—ಛಂದಸ್ಸಿನ ದೃಷ್ಟಿಯಿಂದ ಈ ಕಾಲದ ಕಾವ್ಯ ಚಂಪೂ ಶೈಲಿಯಲ್ಲಿದೆ (ಒಂದು ರೀತಿಯ ಗದ್ಯ ಮಿಶ್ರಿತ ಪದ್ಯ).
(To be Continued...)
(Courtesy: sobagu)

No comments:
Post a Comment