"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Wednesday 4 May 2016

☀️ ಬ್ರೆಡ್ ತಯಾರಿಕೆಯಲ್ಲಿ ಯೀಸ್ಟ್ (ಹುದುಗು) ಬಳಕೆ ಬೇಕೆ ಬೇಕು. ಏಕೆ?

☀️ ಬ್ರೆಡ್ ತಯಾರಿಕೆಯಲ್ಲಿ ಯೀಸ್ಟ್ (ಹುದುಗು) ಬಳಕೆ ಬೇಕೆ ಬೇಕು. ಏಕೆ?
━━━━━━━━━━━━━━━━━━━━━━━━━━━━━━━━━━━━━━━━━━━━━
★ ಸಾಮಾನ್ಯ ವಿಜ್ಞಾನ 
(General Science)


ANS:—        ಯೀಸ್ಟ್ ಎಂಬುದು ಕಣ್ಣಿಗೆ ಕಾಣದ ಫಂಗಸ್. ಬ್ರೆಡ್ ತಯಾರಿಸಲು ಯೀಸ್ಟ್ ಬಳಸದಿದ್ದರೆ ಬ್ರೆಡ್ ಊದಿಕೊಂಡು ಮೆತ್ತಗೆ ಇರುವುದಿಲ್ಲ. ಬದಲಿಗೆ ಚಪಾತಿಯಂತಾಗುವುದು. ಯೀಸ್ಟನ್ ಕೆಲಸವನ್ನು ಅರಿಯಲು ಹೀಗೊಂದು ಪ್ರಯೋಗ ಮಾಡಬಹುದು. ಮೂರು ಚಮಚದಷ್ಟು ಯೀಸ್ಟನ್ನು ಗಾಜಿನ ಬಾಟಲಿಗೆ ಹಾಕಿ. ನಂತರ ಎರಡು ಚಮಚದಷ್ಟು ಸಕ್ಕರೆ ಹಾಕಿ. ನಿಧಾನವಾಗಿ ಅರ್ಧ ಬಾಟಲಿಯಷ್ಟು ಬೆಚ್ಚನೆ ನೀರು ತುಂಬಿ ಬಲೂನಿನ ಬಾಯಿಯನ್ನು ಬಾಟಲಿಯ ತುದಿಗೆ ಭದ್ರಪಡಿಸಿ. ಇದಾದ ಒಂದು ಗಂತೆಯ ನಂತರ ನೀರಿನಲ್ಲಿ ಗುಳ್ಳೆಗಳು ಉಂಟಾಗಿ ಬಲೂನಿಗೆ ಗಾಳಿ ತುಂಬಿಕೊಳ್ಳುವುದು. ಯೀಸ್ಟ್ ಸಕ್ಕರೆಯನ್ನು ಭಕ್ಷಿಸುವುದರಿಂದ ಹೀಗಾಗುವುದು.

ಈ ಪ್ರಕ್ರಿಯೆಯಲ್ಲಿ ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿಯಾಗುವುದು. ಈ ಅನಿಲ ನೀರಿನ ಮೂಲಕ ಹಾದು ಬಲೂನಿನೊಳಗೆ ಸೇರುವುದು. ಬ್ರೆಡ್ ತಯಾರಿಕೆಯಲ್ಲಿ ಯೀಸ್ಟ್ ಬಳಸಿದಾಗ ಹಿಟ್ಟಿನಲ್ಲಿರುವ ನೈಸರ್ಗಿಕ ಸಕ್ಕರೆಯನ್ನು ಯೀಸ್ಟ್ ಭಕ್ಷಿಸಿ ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ ಮಾಡುವುದು. ಬ್ರೆಡ್ ಸುಡುವಾಗ ಈ ಅನಿಲ ಹೊರ ಹೋಗಲು ಬ್ರೆಡ್ ಊದಿಕೊಳ್ಳುವುದು.

No comments:

Post a Comment