"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Saturday 24 September 2016

☀.ಪಿಡಿಓ ಪರೀಕ್ಷೆ ವಿಶೇಷಾಂಕ - ಗ್ರಾಮ ವಿಕಾಸ ಯೋಜನೆ (Gram Vikas Yojana / Rural Development Scheme )

☀.ಪಿಡಿಓ ಪರೀಕ್ಷೆ ವಿಶೇಷಾಂಕ - ಗ್ರಾಮ ವಿಕಾಸ ಯೋಜನೆ
(Gram Vikas Yojana / Rural Development Scheme )
•─━━━━━═══════════━━━━━─••─━━━━━═══════════━━━━━─•

★ ಪಿಡಿಓ ಪರೀಕ್ಷಾ ಅಧ್ಯಯನ ವಿಶೇಷಾಂಕ
(PDO Exam Study Notes)

★ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ 
(Rural Development & Panchayat Raj)


ಗ್ರಾಮಗಳ ಅಭಿವೃದ್ಧಿಗೆ ಮಾತ್ರ ಸೀಮಿತವಾಗಿದ್ದ ಸುವರ್ಣ ಗ್ರಾಮೋದಯ ಯೋಜನೆಗೆ ಕೊಕ್ ನೀಡಿರುವ ರಾಜ್ಯ ಸರ್ಕಾರ, ಪರ್ಯಾಯವಾಗಿ ಸಮಗ್ರ ಗ್ರಾಮಾಭಿವೃದ್ಧಿಯ ಜತೆಗೆ ಗ್ರಾಮದ ಯುವಜನತೆಗೆ ಕೌಶಲ ತರಬೇತಿಯ ಮೂಲಕ ಅವರ ಜೀವನಮಟ್ಟ ಸುಧಾರಿಸುವ ಹೊಸ ‘ಗ್ರಾಮ ವಿಕಾಸ’ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ.


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಾರಿಗೊಳಿಸಲಿರುವ ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ 3 ವರ್ಷಗಳ ಕಾಲಮಿತಿ ಹಾಕಿಕೊಂಡಿದೆ.

ಪ್ರತಿ ವಿಧಾನಸಭಾ ಕ್ಷೇತ್ರದಿಂದ 5 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರತಿ ಗ್ರಾಮಕ್ಕೆ 75 ಲಕ್ಷ ರೂ.ನಂತೆ ಒಂದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಟ್ಟು75 ಕೋಟಿ ರೂ.ಗಳನ್ನು ಯೋಜನೆಯಡಿ ವೆಚ್ಚ ಮಾಡಲಾಗುತ್ತದೆ.

ಅನುದಾನವನ್ನು ಬಳಕೆ ಮಾಡಿಕೊಳ್ಳುವ ಅಧಿಕಾರವನ್ನು ಗ್ರಾಪಂಗಳಿಗೆ ನೀಡಲಾಗಿದೆ. ಯಾವ ಯೋಜನೆಗಳಿಗೆ ಈ ಹಣ ಖರ್ಚು ಮಾಡಬೇಕು ಮತ್ತು ಯಾವುದಕ್ಕೆ ಖರ್ಚು ಮಾಡಬಾರದು ಎಂಬುದಕ್ಕೆ ಸಂಬಂಧಿಸಿದಂತೆ ಸ್ಪಷ್ಟ ನಿಯಮಾವಳಿ ರೂಪಿಸಲಾಗಿದೆ.

ಪ್ರತಿ 3 ತಿಂಗಳಿಗೊಮ್ಮೆ ಅನುದಾನವನ್ನು ಜಿಪಂಗಳ ಮೂಲಕ ಗ್ರಾಪಂಗಳ ಖಾತೆಗೆ ನೇರವಾಗಿ ಸಂದಾಯ ಮಾಡುವ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ಪ್ರಗತಿಯನ್ನು ಪ್ರತಿ 2 ತಿಂಗಳಿಗೊಮ್ಮೆ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಪರಿಶೀಲಿಸಬೇಕೆಂದು ಸೂಚಿಸಲಾಗಿದೆ.


★ ನಿರುದ್ಯೋಗಳಿಗಾಗಿ ತರಬೇತಿ: 

ಗ್ರಾಮೀಣ ಭಾಗದ ಜನ ಕೃಷಿಯನ್ನಷ್ಟೇ ನೆಚ್ಚಿಕೊಳ್ಳಬಾರದೆಂಬ ಕಾರಣಕ್ಕೆ ಗ್ರಾಮ ವಿಕಾಸ ಯೋಜನೆಯಲ್ಲಿ ಯುವಕ-ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು.

ತರಬೇತಿ ನಂತರ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವು, ಸ್ವಸಹಾಯ ಗುಂಪುಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಸಂಘಗಳ ಒಕ್ಕೂಟ ಸ್ಥಾಪಿಸುವ ಅವಕಾಶ ಕಲ್ಪಿಸಲಾಗಿದೆ.

★ ಸುವರ್ಣ ಗ್ರಾಮೋದಯ ಸಮಾಪ್ತಿ ಏಕೆ?

ಬಿಜೆಪಿ-ಜೆಡಿಎಸ್ ಸಮಿಶ್ರ ಸರ್ಕಾರ ಸುವರ್ಣ ಗ್ರಾಮೋದಯ ಯೋಜನೆ ಜಾರಿಗೊಳಿಸಿತ್ತು. ಒಂದು ಗ್ರಾಮದ ಸಮಗ್ರ ಅಭಿವೃದ್ಧಿಗೆ 1 ಕೋಟಿ ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಆದರೆ ನಂತರದ ಹಂತಗಳಲ್ಲಿ 1 ಕೋಟಿ ರೂಪಾಯಿಗಳನ್ನು 2 ಅಥವಾ 3 ಗ್ರಾಮಗಳಿಗೆ ಹಂಚಿಕೆ ಮಾಡಲಾಯಿತು. ಅಭಿವೃದ್ಧಿಗೆ ಅನುಗುಣವಾಗಿ ಅನುದಾನ ಹಂಚಿಕೆಯಾಗಲಿಲ್ಲ. ಮಹಾಲೇಖಪಾಲರು ಈ ರೀತಿಯ ಅನುದಾನ ಹಂಚಿಕೆಯ ಕುರಿತು ತಮ್ಮ ವರದಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಗ್ರಾಮ ವಿಕಾಸ ಯೋಜನೆ ಜಾರಿಗೊಳಿಸಲಾಗಿದೆ.

No comments:

Post a Comment