☀ 2015-16 ನೇ ಸಾಲಿನ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಗಳು :
1.ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ(PMKSY) :
━━━━━━━━━━━━━━━━━━━━━━━━━━━━━━━━━━━━━━━━━━━━━
★ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಗಳು
(Central Sponsored schemes)
★ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಮುಖ್ಯಾಂಶಗಳು :
️
•► ಕೃಷಿ ಕ್ಷೇತ್ರವನ್ನು ಸಬಲಗೊಳಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆ ಇದಾಗಿದ್ದು, ಐದು ವರ್ಷಗಳ ಅವಧಿಯಲ್ಲಿ(2015-16 ರಿಂದ 2019-20ರವರೆಗೆ) 50 ಸಾವಿರ ಕೋಟಿ ಹಣ ವೆಚ್ಚ ಮಾಡಿ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವುದಾಗಿದೆ.
•► ಕೃಷಿಗೆ ಪೂರಕವಾಗಿರುವ ಭೂಮಿಯಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿಗೊಳಿಸುವುದು ಯೋಜನೆಯ ಉದ್ದೇಶವಾಗಿದ್ದು, ವಿಕೇಂದ್ರೀಕರಣದ ಅಡಿಯಲ್ಲಿ ರಾಜ್ಯ ಮಟ್ಟದಲ್ಲಿ ಇದಕ್ಕೆ ನೀಲನಕ್ಷೆ ರೂಪಿಸಬೇಕಿರುತ್ತದೆ.
•► ಇದಕ್ಕಾಗಿ ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ರಾಜ್ಯ ಸರ್ಕಾರ ಯೋಜನೆಗಳನ್ನು ಕಾರ್ಯಗತಗೊಳಿಸಲು ಯೋಜನೆಯನ್ನು ರೂಪಿಸಬೇಕಾಗಿದ್ದು, ಮುಂದಿನ 5ರಿಂದ 7 ವರ್ಷಗಳ ಅವಧಿಗೆ ನೀಲನಕ್ಷೆಯನ್ನು ತಯಾರಿಸಬೇಕಿರುತ್ತದೆ.
•► ರಾಷ್ಟ್ರದ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಈಶಾನ್ಯ ರಾಜ್ಯಗಳೂ ಸಹ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ಅವಕಾಶವನ್ನು ಕಲ್ಪಿಸಿದೆ.
•► ಇದಕ್ಕಾಗಿ ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ನ್ಯಾಶನಲ್ ಸ್ಟೀರಿಂಗ್ ಕಮಿಟಿಯೊಂದನ್ನು ರಚಿಸಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಈ ಯೋಜನೆಯ ಮೇಲುಸ್ತುವಾರಿ ನೋಡಿಕೊಳ್ಳಲು ರಾಷ್ಟ್ರೀಯ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಲಾಗಿದ್ದು, ನೀತಿ ಆಯೋಗದ ಉಪಾಧ್ಯಕ್ಷರು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.
•► ಕೃಷಿಗೆ ಅಗತ್ಯವಾಗಿರುವ ನೀರಾವರಿ ಯೋಜನೆಗಳನ್ನು ಸಿದ್ಧಪಡಿಸಿ ಜಾರಿಗೊಳಿಸುವುದು, ನೀರಾವರಿ ನಿರ್ವಹಣೆ, ರೈತರಿಗೆ ಸಹಕಾರಿಯಾಗಬಲ್ಲ ಬೆಳೆ ಜೋಡಣೆ ಸೇರಿದಂತೆ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬೇರುಮಟ್ಟದಿಂದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
•► ಪ್ರಸಕ್ತ ಆರ್ಥಿಕ ವರ್ಷಗದಲ್ಲಿ ಇದಕ್ಕಾಗಿ 5,300 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸ್ತುತ ದೇಶದಾದ್ಯಂತ 142 ಮಿಲಿಯನ್ ಹೆಕ್ಟೇರ್ ಕೃಷಿ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ಶೇ.45 ರಷ್ಟು ನೀರಾವರಿ ಭೂಮಿಯಾಗಿದೆ.

...ಮುಂದುವರೆಯುವುದು.
No comments:
Post a Comment