"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Tuesday, 24 January 2017

☀️ VIII.ಅಂಬೇಡ್ಕರ್‌ ನಿವಾಸ ಯೋಜನೆ. (Ambedkar Niwas Yojana)

☀️ VIII.ಅಂಬೇಡ್ಕರ್‌ ನಿವಾಸ ಯೋಜನೆ.
(Ambedkar Niwas Yojana)
━━━━━━━━━━━━━━━━━━━━━━━━━━━━━━━━━━━━━━━━━━━━━

★ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಗಳು :
(Central Sponsored schemes)


★ ಅಂಬೇಡ್ಕರ್‌ ನಿವಾಸ ಯೋಜನೆ

•► ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ 125ನೇ ಜಯಂತಿ ಅಂಗವಾಗಿ 2015–16ನೇ ಸಾಲಿನಲ್ಲಿ ಪರಿಶಿಷ್ಟರಿಗೆ ವಸತಿ ಒದಗಿಸಲು ಅಂಬೇಡ್ಕರ್‌ ನಿವಾಸ ಯೋಜನೆ ಜಾರಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ.

•►  ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯ ಅಡಿಯಲ್ಲೇ ಈ ಯೋಜನೆಗೆ ಅನುದಾನ ಹೊಂದಿಸಲಾಗುವುದು.

•►  ಗ್ರಾಮೀಣ ಪ್ರದೇಶಲ್ಲಿ ಮನೆ ನಿರ್ಮಿಸಲು ಫಲಾನುಭವಿಗಳಿಗೆ ₹ 1.5 ಲಕ್ಷ ಹಾಗೂ ನಗರ ಪ್ರದೇಶದಲ್ಲಿ ₹1.8 ಲಕ್ಷ ಅನುದಾನ ನೀಡಲಾಗುವುದು.

•►  ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಆಧರಿಸಿ, ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ 1 ಲಕ್ಷ ಹಾಗೂ ನಗರ ಪ್ರದೇಶದಲ್ಲಿ 50 ಸಾವಿರ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ.

•►  ಎರಡು ವರ್ಷಗಳ ಒಳಗೆ ಈ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುವುದು

No comments:

Post a Comment