"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Friday, 21 April 2017

Updated***■."ಸ್ಪರ್ಧಾಲೋಕ" — ಈಗ WhatsApp, Telegram ಮತ್ತು Facebook ಗಳಲ್ಲಿ.

■."ಸ್ಪರ್ಧಾಲೋಕ" — ಈಗ WhatsApp, Telegram ಮತ್ತು Facebook ಗಳಲ್ಲಿ.
━━━━━━━━━━━━━━━━━━━━━━━━━━━━━━━━━━━━━━━━━━

ಹಲೋ ಗೆಳೆಯರೆ...

●. ಸ್ಪರ್ಧಾಲೋಕವನ್ನು ಸಾಧ್ಯವಾದಷ್ಟು ಮಟ್ಟಿಗೆ ಇನ್ನೂ ಪರಿಣಾಮಕಾರಿಯಾಗಿ ಜ್ಞಾನ ಹಂಚಿಕೊಳ್ಳುವಂತಾಗಲು... ಜ್ಞಾನದಾಹಿಗಳಿಗೆ, ಪ್ರತಿಭೆಗಳಿಗೆ ನಮ್ಮ ಮಾತೃಭಾಷೆಯಾದ  ಕನ್ನಡದಲ್ಲಿ  ತ್ವರಿತವಾಗಿ ಜ್ಞಾನ ಮಾಹಿತಿಗಳನ್ನು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗುವ ಉಪಯುಕ್ತ ನೋಟ್ಸ್ ನ್ನು ಪಡೆಯಲು ಸಹಕಾರಿಯಾಗಲೆಂದು ನಾನು ಸಾಮಾಜಿಕ ಜಾಲತಾಣಗಳಾದ WhatsApp, Telegram ಮತ್ತು Facebook ಗಳನ್ನು  ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಒಂದು ಚಿಕ್ಕ ಪ್ರಯತ್ನ ಕೈಗೊಂಡಿದ್ದೇನೆ.

●. ಇದು ನಿರ್ದಿಷ್ಟ ಗುರಿಗಳನ್ನು ಹೊಂದಿದ ಸ್ಪರ್ಧಾರ್ಥಿಗಳನ್ನು ಒಂದೆಡೆಗೆ ಸಂಘಟಿಸಿ ಆ ಮೂಲಕ ಜ್ಞಾನದ ಸರ್ವ ಎಲ್ಲೆಗಳನ್ನು ಮುಕ್ತ ಮನಸ್ಸಿನಿಂದ ಹಂಚಿಕೊಳ್ಳಲು ಸಹಕಾರಿಯಾಗುವುದೆಂದು ನನ್ನ ಅಭಿಪ್ರಾಯ.

●. ಈ ಗ್ರುಪ್ ಕೇವಲ ಜ್ಞಾನ ಹಂಚಿಕೆಗೆ ಮಾತ್ರ ಸೀಮಿತವಾಗಿದ್ದು, ಯಾವುದೇ ರೀತಿಯ (Chatting) ಸಂಭಾಷಣೆಗೆ, ಯಾವುದೇ ವ್ಯಕ್ತಿಯ ಬಗ್ಗೆ, ರಾಜಕಾರಣಿಗಳ ಬಗ್ಗೆ, ರಾಜಕೀಯ ಪಕ್ಷಗಳ ಬಗ್ಗೆ, ಧರ್ಮಗುರುಗಳ ಬಗ್ಗೆ, ಧರ್ಮದ ಬಗ್ಗೆ, ಸಂಸ್ಥೆಗಳ ಬಗ್ಗೆ ಟೀಕೆ ಟಿಪ್ಪಣಿಗಳಿಗೆ ಇಲ್ಲಿ ಆಸ್ಪದವಿಲ್ಲ.

●.ವಿಶೇಷವಾಗಿ ಐಎಎಸ್ (IAS) ಮತ್ತು ಕೆಎಎಸ್ (KAS) ನಂಥ  ಮುಖ್ಯ ಪರೀಕ್ಷೆಗಳಿಗೆ (MAIN EXAMS) ಮುಖ್ಯವಾಗಿ ಕನ್ನಡ ಮಾತೃಭಾಷೆಯಲ್ಲಿ  ಸಿದ್ಧತೆ ನಡೆಯುತ್ತಿರುವ ಅಭ್ಯರ್ಥಿಗಳಿಗಾಗಿ  ವಿವರಣಾತ್ಮಕ ಟಿಪ್ಪಣಿ / ಬರಹಗಳನ್ನು ಪೂರೈಸುವ ನಿಟ್ಟಿನಲ್ಲಿ ಒಂದು ಚಿಕ್ಕ ಪ್ರಯತ್ನ ಇದಾಗಿದೆ.

●. ಗ್ರುಪ್ ನಲ್ಲಿ ಪ್ರತಿದಿನವೂ ಕ್ವಿಝ್ ಕಾರ್ಯಕ್ರಮ (PC, PSI, PDO, RDO, RRB, TET ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೋತ್ತರಗಳು) ಹಾಗೂ ಚರ್ಚಾಕೂಟ ಹಮ್ಮಿಕೊಳ್ಳಲಾಗುವುದು.

●. ಪ್ರತಿದಿನ ಒಂದು ವಿಷಯದ ಬಗ್ಗೆ ಚರ್ಚೆಯನ್ನು ನಡೆಸಲಾಗುವುದು. ಪ್ರತಿಯೊಬ್ಬರಿಗೂ ಅವರ ಸಲಹೆ comment ಕೊಡಲು ಅವಕಾಶವಿದ್ದು, ಇಲ್ಲಿ ಇನ್ನೊಬ್ಬರಿಗೆ ಮಾನಹಾನಿ,  ಮಾನಸಿಕ ಕಿರಿಕಿರಿ, ಗೊಂದಲವುಂಟಾಗದ ಹಾಗೆ ಸರ್ವರಿಗೂ ಅನ್ವಯವಾಗುವ, ಪರೀಕ್ಷೆಗಳಿಗೆ ಸಹಾಯವಾಗುವ ರೀತಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಎಲ್ಲರೂ ಹಂಚಿಕೊಳ್ಳಬಹುದು.

■. incase ತಮ್ಮಲ್ಲಿ ಏನಾದರೂ ಸಂದೇಹಗಳಿದ್ದಲ್ಲಿ ನೇರವಾಗಿ ನನ್ನನ್ನು ಸಂಪರ್ಕಿಸಿ. ಗ್ರುಪ್ ನಲ್ಲಿ ಯಾವುದೇ ವೈಯುಕ್ತಿಕ Chatting ಗೆ ಆಸ್ಪದವಿರುದಿಲ್ಲ.

●. Seriously. ಜೀವನದಲ್ಲಿ ಏನಾದರೊಂದು ಸಾಧಿಸಿ ತೋರಿಸಬೇಕೆಂದುಕೊಂಡವರಿಗೆ ಈ ಗ್ರುಪ್ ಗೆ ಸ್ವಾಗತ.

••┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈••

1) Telegram :
☀'ಸ್ಪರ್ಧಾಲೋಕ'-'IAS/KAS..in ಕನ್ನಡದಲ್ಲಿ'. Telegram Channel :—
Add ಆಗಲು ಈ ಲಿಂಕ್ ಗೆ ಕ್ಲಿಕ್ ಮಾಡಿ.(Link to Join)...
"ಐಎಎಸ್ /ಕೆಎಎಸ್ ಪರೀಕ್ಷಾ ಸಂಬಂಧಪಟ್ಟಂತೆ ಕನ್ನಡದಲ್ಲಿ ವಿಸ್ತೃತ ನೋಟ್ಸ್ ಒದಗಿಸುವ ಒಂದು ಚಿಕ್ಕ ಪ್ರಯತ್ನ "(IAS/KAS Notes in Kannada)

👉Add ಆಗಲು ಈ ಲಿಂಕ್ ಗೆ ಕ್ಲಿಕ್ ಮಾಡಿ...👇

👉 ಸ್ಪರ್ಧಾಲೋಕ ಚರ್ಚಾಕೂಟ (Discussion) SUPERGROUP ಗೆ Add ಆಗಲು ಈ ಲಿಂಕ್ ಗೆ ಕ್ಲಿಕ್ ಮಾಡಿ...👇


🌍"ಸ್ಪರ್ಧಾಲೋಕ ಬ್ಲಾಗ್ ಲಿಂಕ್ "🌎
Blog link..👉 https://www.spardhaloka.blogspot.com


2) Facebook :
ಫೇಸಬುಕ್ ಪೇಜಿಗೆ Add ಆಗಲು ಈ ಲಿಂಕ್ ಗೆ ಕ್ಲಿಕ್ ಮಾಡಿ...


3) WhatsApp :


ಇಲ್ಲಿ ವೈಯುಕ್ತಿಕ ಮೋಬೈಲ್ ನಂ ಗಳು Misuse ಆಗಬಾರದೆಂಬ ಕಾರಣದಿಂದ Confidential ಕಾಪಾಡಿಕೊಳ್ಳಲು ಮೊದಲು Telegram ನಲ್ಲಿ join ಆಗಿ, ಚರ್ಚಿಸಿಯೇ ನಂತರ ಅಲ್ಲಿಂದ whatsApp ಗ್ರುಪ್ ಗೆ ಸೇರಿಸಿಕೊಳ್ಳಲಾಗುವುದು.

☀ ಬಿಎಸ್ ಅಥವಾ ಭಾರತ್ ಸ್ಟೇಜ್ ಎಂದರೇನು ? (What is BS -Bharath Stage)

☀ ಬಿಎಸ್ ಅಥವಾ ಭಾರತ್ ಸ್ಟೇಜ್ ಎಂದರೇನು ?
(What is BS -Bharath Stage)
•─━━━━━═══════════━━━━━─••─━━━━━═══════════━━━━━─•

★ ಸಾಮಾನ್ಯ ಅಧ್ಯಯನ
(General Studies)

★ ಪ್ರಚಲಿತ ಘಟನೆಗಳು
(Current Affairs)


☀ ಬಿಎಸ್ ಅಥವಾ ಭಾರತ್ ಸ್ಟೇಜ್ :
•─━━━━━═══════════━━━━━─•

●.ಭಾರತ್  ಸ್ಟೇಜ್ ಅಂದರೆ ವಾಹನಗಳಲ್ಲಿನ ಮಾಲಿನ್ಯ ಮಟ್ಟವನ್ನು ಗುರುತಿಸುವ ವ್ಯವಸ್ಥೆ ಅಥವಾ ಮೋಟಾರು ವಾಹನಗಳ ವಾಯುಮಾಲಿನ್ಯ ಪರಿಮಿತಿ ಮಾನದಂಡ. ವಾಹನಗಳ ಎಂಜಿನ್‌ ಎಷ್ಟು ಪ್ರಮಾಣದಲ್ಲಿ ಮಾಲಿನ್ಯ ಹೊರ ಸೂಸಬೇಕು ಎಂಬುದನ್ನು ಈ ಮೂಲಕ ನಿಗದಿಪಡಿಸಲಾಗುತ್ತದೆ.

●.ಯೂರೋಪ್‌ ರಾಷ್ಟ್ರಗಳಲ್ಲಿ ಜಾರಿಯಲ್ಲಿದ್ದ ‘ಯೂರೊ 1’ ಮಾನದಂಡಕ್ಕೆ ಸರಿಸಮನಾದ ಮಾನದಂಡಗಳನ್ನು 1999ರ ಜೂನ್ 1ರಿಂದ ಜಾರಿಗೆ ತರುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತು. ಅದನ್ನು “ಭಾರತ್‌ 2000’ ಎಂದು ಜಾರಿಗೆ ತರಲಾಯಿತು. ಅದನ್ನೇ ‘ಭಾರತ್‌ ಸ್ಟೇಜ್ 1’ ಎಂದು ಪರಿಗಣಿಸಲಾಗುತ್ತದೆ. ಜತೆಗೆ ‘ಯೂರೊ 2’ಗೆ ಸಮನಾದ ಮಾಲಿನ್ಯ ನಿಯಂತ್ರಣ ಮಾನದಂಡವನ್ನು ದೆಹಲಿ ಎನ್‌ಸಿಆರ್‌ನಲ್ಲಿ 2000ರ ಏಪ್ರಿಲ್‌ನಿಂದ ಕಡ್ಡಾಯ ಮಾಡಿ ಆದೇಶ ನೀಡಲಾಗಿತ್ತು.

●.ಈ ಪರಿಸರ ಮಾಲಿನ್ಯ ನಿಯಂತ್ರಣದ ಮಾನದಂಡಗಳನ್ನು ಅನುಸರಿಸಲು ವಾಹನಗಳ ಎಂಜಿನ್‌ ಗುಣಮಟ್ಟ ಅತ್ಯಾಧುನಿಕವಾಗಿದ್ದರೆ ಸಾಲದು, ಇಂಧನದ ಗುಣಮಟ್ಟವೂ ಹೆಚ್ಚಬೇಕಿತ್ತು.

●.ಆದರೆ ಈ ಹಠಾತ್‌ ಮತ್ತು ಕ್ಷಿಪ್ರ ಪರಿವರ್ತನೆಗೆ ಇಂಧನ ಸಂಸ್ಥೆಗಳು ಮತ್ತು ವಾಹನಗಳ ಬಿಡಿಭಾಗಗಳ ತಯಾರಕರು (ಒರಿಜಿನಲ್ ಇಕ್ವಿಪ್‌ಮೆಂಟ್ಸ್ ಮ್ಯಾನುಫಾಕ್ಚರರ್ಸ್- ಒಇಎಂ) ಅಗತ್ಯ ಸಿದ್ಧತೆ ಮಾಡಿಕೊಂಡಿರಲಿಲ್ಲ. ಈ ಸಂಬಂಧ ಅಗತ್ಯವಿದ್ದ ಇಂಧನ ನೀತಿಯೂ ಭಾರತದಲ್ಲಿ ಜಾರಿಯಲ್ಲಿರಲಿಲ್ಲ. ಹೀಗಾಗಿ ‘ಯೂರೊ 2’ ಅಥವಾ ‘ಭಾರತ್‌ ಸ್ಟೇಜ್‌ 2’ ನಿಗದಿತ ಕಾಲಮಿತಿಯಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ಬರಲಿಲ್ಲ.

●.ಈ ಮಾನದಂಡಗಳ ಜಾರಿ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳು, ವೆಚ್ಚ, ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಎರಡು ಸಮಿತಿಗಳನ್ನು ರಚಿಸಿತ್ತು. ಯೂರೋಪ್‌ನಲ್ಲಿ ಜಾರಿಯಲ್ಲಿರುವ ಮಾನದಂಡಗಳನ್ನು ಜಾರಿಗೆ ತರುವಂತೆ ಈ ಸಮಿತಿಗಳು ಶಿಫಾರಸು ಮಾಡಿತು. ಸರ್ಕಾರ ಅದನ್ನು ಒಪ್ಪಿಕೊಂಡಿತು.

●.ಇವುಗಳ ಜಾರಿಗೆ ಈ ಸಮಿತಿಗಳು ಕಾಲಮಿತಿಯನ್ನು ನಿಗದಿಪಡಿಸಿದವು. 2010ರಲ್ಲಿ ದೇಶದಾದ್ಯಂತ ‘ಬಿಎಸ್‌ 3 ’ ಜಾರಿಗೆ ತರಲಾಯಿತು. ನಂತರ ದೇಶದ ಪ್ರಮುಖ 17 ನಗರಗಳಲ್ಲಿ ಪ್ಯಾಸೆಂಜರ್‌ ಕಾರುಗಳಿಗೆ ‘ಬಿಎಸ್‌ 4’ ಪರಿಮಾಣಗಳನ್ನು ಕಡ್ಡಾಯ ಮಾಡಲಾಯಿತು. 2017ರ ಹೊತ್ತಿಗೆ ದೇಶದಾದ್ಯಂತ ಬಿಎಸ್‌4, 2020ರ ಹೊತ್ತಿಗೆ ಬಿಎಸ್‌5 ಮತ್ತು 2024ಕ್ಕೆ ಬಿಎಸ್‌6 ಜಾರಿಗೆ ತರುವಂತೆ ಈ ಸಮಿತಿಗಳು ಸೂಚಿಸಿದ್ದವು.


☀ ಬಿಎಸ್ ಅಥವಾ ಭಾರತ್ ಸ್ಟೇಜ್ ನ ಪ್ರಸ್ತುತತೆ :
•─━━━━━═══════════━━━━━─•

●.ಮೋಟಾರು ವಾಹನಗಳ ವಾಯುಮಾಲಿನ್ಯ ಪರಿಮಿತಿ ಮಾನದಂಡ ಬಿಎಸ್ IV ಏಪ್ರಿಲ್ 1ರಿಂದ ಜಾರಿಗೆ ಬರುವ ಹಿನ್ನೆಲೆಯಲ್ಲಿ ಮಾಲಿನ್ಯಕಾರಕ ಬಿಎಸ್ III ವಾಹನಗಳ ನೋಂದಣಿ ಮತ್ತು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ.

●.ಪರಿಸರ ಮಾಲಿನ್ಯ  ನಿಯಂತ್ರಣ ಮಂಡಳಿ ಸಲ್ಲಿಸಿದ ಅರ್ಜಿ ಬಗ್ಗೆ ಬುಧವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಾಣಿಜ್ಯ ಹಿತಾಸಕ್ತಿಗಿಂತ ಲಕ್ಷಾಂತಕ ಜನರ ಆರೋಗ್ಯದ ಹಿತಾಸಕ್ತಿ ಮುಖ್ಯ ಎಂದು ಹೇಳಿದೆ. ಅದೇ ವೇಳೆ ಮಾರ್ಚ್ 31ರ ಬಳಿಕ ಬಿಎಸ್ III (ಭಾರತ್ ಸ್ಟೇಜ್ III)  ವಾಹನಗಳ ನೋಂದಣಿ ಮಾಡದಂತೆ ಸರ್ಕಾರಕ್ಕೆ ಆದೇಶಿಸಿದ ನ್ಯಾಯಾಲಯ ಈ ವಾಹನಗಳ ಮಾರಾಟವನ್ನು ನಿಷೇಧಿಸಿ ತೀರ್ಪು ನೀಡಿದೆ.

●.ವಾಹನ ತಯಾಕರು ತಮ್ಮ ವಾಹನಗಳನ್ನು ಬಿಎಸ್ IV ಮಾನದಂಡಕ್ಕೆ ತಕ್ಕಂತೆ ಮೇಲ್ದರ್ಜೆಗೆ ಏರಿಸಬೇಕು ಮತ್ತು ಇದನ್ನು ಸರ್ಕಾರ ಖಾತ್ರಿ ಪಡಿಸಬೇಕು ಎಂದು ಕೋರ್ಟ್ ಹೇಳಿದೆ.

●.ಸುಪ್ರೀಂಕೋರ್ಟ್‍ನ ಈ ತೀರ್ಪಿನಿಂದಾಗಿ ಮಾರಾಟಕ್ಕೆ ಸಿದ್ಧವಾಗಿರುವ ಸರಿಸುಮಾರು 8 ಲಕ್ಷ ಬಿಎಸ್ III ವಾಹನಗಳ ಮೇಲೆ ಹೊಡೆತ ಬೀಳಲಿದೆ.

●.2010ರಿಂದ ಬಿಎಸ್ IVನ್ನು ಹಂತ ಹಂತವಾಗಿ ಪರಿಚಯಿಸಲಾಗಿದ್ದು, ಇದು ಏಪ್ರಿಲ್ 1ರಿಂದ ದೇಶದಾದ್ಯಂತ ಜಾರಿಯಾಗುವ ಸಾಧ್ಯತೆ ಇದೆ.

●.ಹಳೆಯ ವಾಹನಗಳು ಮಾರುಕಟ್ಟೆಯಲ್ಲಿ ಮುಂದುವರಿದರೆ ಸ್ವಚ್ಛ ಇಂಧನ ತಂತ್ರಜ್ಞಾನವನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ. ಬಜಾಜ್ ಹೊರತು ಪಡಿಸಿ ಇನ್ನಿತರ ಆಟೊಮೊಬೈಲ್ ಕಂಪನಿಗಳು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅರ್ಜಿಯನ್ನು ವಿರೋಧಿಸಿದ್ದವು.

(ಕೃಪೆ :ಪ್ರಜಾವಾಣಿ)

☀ ಮೋಟಾರು ವಾಹನ (ತಿದ್ದುಪಡಿ) ಮಸೂದೆ–2016 (Motor Vehicle (Amendment) Act - 2016)

☀ ಮೋಟಾರು ವಾಹನ (ತಿದ್ದುಪಡಿ) ಮಸೂದೆ–2016
(Motor Vehicle (Amendment) Act - 2016)
•─━━━━━═══════════━━━━━─••─━━━━━═══════════━━━━━─•

★ ಸಾಮಾನ್ಯ ಅಧ್ಯಯನ
(General Studies)

★ ಪ್ರಚಲಿತ ಘಟನೆಗಳು
(Current Affairs)



●.ಸಂಚಾರ ನಿಯಮಗಳ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸುವ ಮತ್ತು  ರಸ್ತೆ ಅಪಘಾತಗಳು ಹಾಗೂ ಅವುಗಳಲ್ಲಿ ಮೃತಪಡುವವರ ಪ್ರಮಾಣವನ್ನು ಶೇ 50ರಷ್ಟು ತಗ್ಗಿಸುವ ಉದ್ದೇಶದ ಮೋಟಾರು ವಾಹನ (ತಿದ್ದುಪಡಿ) ಮಸೂದೆ–2016 ಅನ್ನು ಲೋಕಸಭೆಯು ಅಂಗೀಕರಿಸಿದೆ.

●.ಕಳೆದ ವರ್ಷದಲ್ಲಿ ಈ ಮಸೂದೆಯನ್ನು ಲೋಕ ಸಭೆ­ಯಲ್ಲಿ ಮಂಡಿಸಲಾಗಿತ್ತು. ನಂತರ ಅದನ್ನು ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಲಾಗಿತ್ತು.

●.ಮಸೂದೆಯಲ್ಲಿ ಕೆಲವು ಬದಲಾವಣೆ ತರಲು ಸ್ಥಾಯಿ ಸಮಿತಿ ಸಲಹೆ ನೀಡಿತ್ತು. ಕೇಂದ್ರ ಸಚಿವ ಸಂಪುಟ ಇದಕ್ಕೆ ಒಪ್ಪಿಗೆ ನೀಡಿತ್ತು. ಮಸೂದೆಗೆ ರಾಜ್ಯಸಭೆ ಇನ್ನಷ್ಟೇ ಸಮ್ಮತಿಸಬೇಕಿದೆ.

☀ ಪ್ರಮುಖ ಅಂಶಗಳು :
•─━━━━━═══════════━━━━━─•
●.ಸಂಚಾರ ನಿಯಮ ಉಲ್ಲಂಘಿಸುವವರಿಗೆ ಭಾರಿ ಮೊತ್ತದ ದಂಡ ವಿಧಿಸಲು ಅವಕಾಶ
●.ವಾಹನಗಳ ವಿನ್ಯಾಸದಲ್ಲಿನ ನ್ಯೂನತೆಗಳಿಂದ ಸಂಭವಿಸುವ ಅಪಘಾತಗಳಿಗೆ ತಯಾರಕರೇ ಹೊಣೆ
●.ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆ ₹ 10 ಲಕ್ಷದವರೆಗೂ ಪರಿಹಾರ
●.ಆನ್‌ಲೈನ್‌ ಮೂಲಕ ಮಾತ್ರ ಕಲಿಕಾ ಪರವಾನಗಿ.(ಲರ್ನರ್‌ ಲೈಸನ್ಸ್– ಎಲ್ಎಲ್) ಲಭ್ಯ
●.ಮೂರು ದಿನಗಳ ಒಳಗೆ ಚಾಲನಾ ಪರವಾನಗಿ. (ಡ್ರೈವಿಂಗ್‌ ಲೈಸನ್ಸ್–ಡಿಎಲ್)  ನೀಡಬೇಕು
●.ಡಿಎಲ್‌ ಪಡೆಯಲು ಮತ್ತು ವಾಹನ ನೋಂದಣಿ ಮಾಡಿಸಲು ಆಧಾರ್ ಸಲ್ಲಿಕೆ ಕಡ್ಡಾಯ
●.ಮಾರಾಟಗಾರರ ಬಳಿಯೇ ವಾಹನ ನೋಂದಣಿಗೆ ಅವಕಾಶ. ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (ಆರ್‌ಟಿಒ) ಹೋಗುವ ಅವಶ್ಯಕತೆ ಇಲ್ಲ
●.ವಾಹನ ಮತ್ತು ಚಾಲನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಡಿಜಿಟಲೀಕರಣ. ಎಲ್ಲವೂ ಆನ್‌ಲೈನ್‌ನಲ್ಲಿ ದೊರೆಯಲಿವೆ
●.ಥರ್ಡ್‌ ಪಾರ್ಟಿ ವಿಮೆ ಅಡಿ ಚಾಲಕನಿಗೂ ಪರಿಹಾರ

***

●.ಗುತ್ತಿಗೆದಾರ ಹೊಣೆ
- ರಸ್ತೆ ವಿನ್ಯಾಸ ಅವೈಜ್ಞಾನಿಕ ರೀತಿಯಲ್ಲಿದ್ದರೆ, ಅದನ್ನು ನಿರ್ಮಿಸಿದ ಗುತ್ತಿಗೆದಾರ ಅಥವಾ ಗುತ್ತಿಗೆದಾರ ಕಂಪೆನಿಗೆ ದಂಡ
- ತಯಾರಕರಿಗೆ ದಂಡ

- ಕಂಪೆನಿಗಳು ಉದ್ದೇಶಪೂರ್ವಕವಾಗಿ  ವಾಯುಮಾಲಿನ್ಯ ನಿಯಮಗಳನ್ನು ಉಲ್ಲಂಘಿಸಿದರೆ ಅಥವಾ ಈ ವಿಚಾರದಲ್ಲಿ  ವಂಚನೆ ನಡೆಸಿದರೆ, ಭಾರಿ ದಂಡ ತೆರಬೇಕಾಗುತ್ತದೆ.

 (ಕೃಪೆ :ಪ್ರಜಾವಾಣಿ)

Monday, 17 April 2017

☀ ಪಿ.ಎಸ್.ಐ. ಪರೀಕ್ಷೆ ಪ್ರಬಂಧ ಬರೆಯುವ ವಿಧಾನ : (How to write Essays in PSI Exam)

☀ ಪಿ.ಎಸ್.ಐ. ಪರೀಕ್ಷೆ ಪ್ರಬಂಧ ಬರೆಯುವ ವಿಧಾನ :
(How to write Essays in PSI Exam)
•─━━━━━═══════════━━━━━─••─━━━━━═══════════━━━━━─•

★  ಪಿ.ಎಸ್.ಐ. ಪರೀಕ್ಷೆ ತಯಾರಿ
(PSI Competitive Exam)

★ ಪ್ರಬಂಧ ಬರೆಯುವ ವಿಧಾನ
(Procedures of writing Essays in PSI Exam)


●.ಪ್ರಬಂಧ ಎಂದರೆ 'ಚೆನ್ನಾಗಿ ಕಟ್ಟುವುದು' ಎಂದರ್ಥ. ಪ್ರಸ್ತುತ ಪಿ.ಎಸ್.ಐ. ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಪಿ.ಎಸ್.ಐ. ಪರೀಕ್ಷೆಯಲ್ಲಿ 20 ಅಂಕಗಳಿಗೆ ಪ್ರಬಂಧ ಬರೆಯಬೇಕಿದ್ದು ಒಟ್ಟು 600 ಪದಗಳ ಮಿತಿಯನ್ನು ನಿಗದಿಗೊಳಿಸಲಾಗಿದೆ. ಕೆ.ಎ.ಎಸ್. ಪರೀಕ್ಷೆಗೆ 1000 ಪದಗಳು ಹಾಗೂ ಐ.ಎ.ಎಸ್. ಪರೀಕ್ಷೆಗೆ 1200 ಪದಗಳಲ್ಲಿ ಪ್ರಬಂಧ ಬರೆಯಬೇಕಿರುತ್ತದೆ.

●.ಪಿ.ಎಸ್.ಐ. ಪರೀಕ್ಷೆ ಬರೆಯುವವರಲ್ಲಿ ಬಹಳಷ್ಟು ಜನ ಓದಿದ್ದನ್ನು ನೆನಪಿನಲ್ಲಿಟ್ಟುಕೊಂಡು ಅದನ್ನೇ ಪರೀಕ್ಷೆಯಲ್ಲಿ ಬರೆಯುತ್ತಾರೆ. ಇದು ಅಷ್ಟೇನೂ ಸೂಕ್ತವಲ್ಲ. ಯಾವುದೇ ರೀತಿಯ ಅಧ್ಯಯನವನ್ನು ನಡೆಸಿದಾಗ ವಿಷಯದ `ಥೀಮ್' ಏನು ಎಂಬುದನ್ನು ಅರ್ಥ ಮಾಡಿಕೊಂಡು ಆ ಥೀಮ್^ನ್ನು ಆಧಾರವಾಗಿಟ್ಟುಕೊಂಡು ನಮ್ಮದೇ ಆದ ಸ್ವಂತ ಆಲೋಚನಾ ಕ್ರಮದಲ್ಲಿ ಬರೆಯುವುದೇ ಸೂಕ್ತ. ಈ ರೀತಿ ಬರೆಯುವವರೇ ಪರೀಕ್ಷೆಯಲ್ಲಿ ಗೆಲ್ಲುತ್ತಿದ್ದಾರೆ.

●.ಮಾದರಿ ಪ್ರಬಂಧಗಳನ್ನು ಹೆಚ್ಚು ಹೆಚ್ಚಾಗಿ ಅಧ್ಯಯನ ಮಾಡಿ. ಇವು ನಮ್ಮಲ್ಲಿ ಆಲೋಚನಾ ಕ್ರಮವನ್ನು ಹುಟ್ಟು ಹಾಕಿ ವಿಮರ್ಶಾತ್ಮಕವಾಗಿ ಬರೆಯುವ ಸಾಮರ್ಥ್ಯ ಬೆಳೆಸುತ್ತವೆ. ವಿಮರ್ಶೆ ಎಂಬುದು ವಿರೋಧವಲ್ಲ. ಕೊಟ್ಟಂತಹ ವಿಷಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ವಿಮರ್ಶಿಸಬೇಕು.

●.ಸಿ.ಇ.ಟಿ. ಅಭ್ಯರ್ಥಿಗಳು ಯವುದೇ ಪಕ್ಷ, ವ್ಯಕ್ತಿ ಬಗ್ಗೆ ನಿರ್ಲಕ್ಷ್ಯ, ಉಡಾಫೆ ಅಥವಾ ಪೂರ್ವಗ್ರಹ ಇಟ್ಟುಕೊಳ್ಳಬಾರದು. ಹಾಗೇನಾದರೂ ಇಟ್ಟುಕೊಂಡರೆ, ವಿಮರ್ಶೆಗೆ ವೈಚಾರಿಕ ಸಮರ್ಥನೆ ಇಲ್ಲದಂತಾಗುತ್ತದೆ. ಭಾವನಾತ್ಮಕ ಉದ್ವೇಗದಿಂದ ಪ್ರಬಂಧ ಬರೆಯುವಂತಾಗುತ್ತದೆ.
ಉದಾ: ಟಿಪ್ಪುವಿನ ಸಾಧನೆಗಳು.  ಪರ ವಿರೋಧವನ್ನು ಸಮಾನದೃಷ್ಟಿಯಿಂದ ನೋಡಿ ವಿಚಾರ ಕೇಂದ್ರಿತವಾಗಿ ವಿಷಯ ನಿರೂಪಿಸಬೇಕು.

●.ಮಾದರಿ ಪ್ರಬಂಧಗಳನ್ನು ಓದುವಾಗ ಯಾವುದಾದರೂ ಪರಿಕಲ್ಪನೆ ಅರ್ಥವಾಗದಿದ್ದರೆ, ಅದನ್ನು ಬಿಟ್ಟು ಮುಂದಕ್ಕೆ ಹೋಗಬಾರದು, ಅರ್ಥ ಮಾಡಿಕೊಂಡೇ ಮುಂದಕ್ಕೆ ಹೋಗಬೇಕು. ಒಂದು ವೇಳೆ ಆಗದಿದ್ದರೆ, ಅದರ ಹಿಂದಿನ ಮತ್ತು ಮುಂದಿನ ವಿಷಯಗಳ ತನಕ ಓದಬೇಕು.

●.ಅಂಕಿ-ಅಂಶಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬಾರದು. ಅವು ಸೂಚಿಸುವ ಅರ್ಥ ಏನು ಎಂದು ತಿಳಿದುಕೊಂಡರೆ ಸಾಕು.
ಉದಾ: ಈ ಹಿಂದೆ ಜನಸಂಖ್ಯೆ 100 ಕೋಟಿ ಇತ್ತು. 2011 ರ ಪ್ರಕಾರ 120ಕೋಟಿ ಆಗಿದೆ ಎಂದು ಅರ್ಥೈಸಿಕೊಂಡರೆ ಸಾಕು. ಅದನ್ನು ಬಿಟ್ಟು 120,84,63,700 ಅಂತ ಚಿಂತಿಸುತ್ತಾ ಸಮಯ ಹಾಳುಮಾಡಬಾರದು.

●.ಪ್ರಬಂಧಗಳನ್ನು ಅಧ್ಯಯನ ಮಾಡುವಾಗ ಒಂದು ಪ್ಯಾರಾದಿಂದ ಮತ್ತೊಂದು ಪ್ಯಾರಾಗೆ ಹೇಗೆ ಸಂಬಂಧ ಕಲ್ಪಿಸಲಾಗಿದೆ ಎಂಬುದನ್ನು ಗಮನಿಸಬೇಕು.

●.ಶಾಲಾ-ಕಾಲೇಜುಗಳಲ್ಲಿ ಬರೆದ ಹಾಗೆ ಪ್ರಬಂಧ ಬರೆಯಬಾರದು. ಶಾಲೆಯಲ್ಲಿನ ಪ್ರಬಂಧಗಳು ವಿವರಣಾತ್ಮಕ ರೀತಿಯದ್ದಾಗಿರುತ್ತವೆ. ಆದರೆ ನಾವು ಬರೆಯುವ ಪ್ರಬಂಧಗಳು ವಿಷಯ/ವಿಚಾರದ ಬಗ್ಗೆ ನಮ್ಮ ಧೋರಣೆ ಏನು ಎಂಬುದನ್ನು ನಿರೀಕ್ಷಿಸುತ್ತವೆ. ಆದ್ದರಿಂದ ಪದಗಳು ವಿಮರ್ಶಾತ್ಮಕ ರೀತಿಯಲ್ಲಿ ಇರಬೇಕಾಗುತ್ತದೆ.

●.ವಿಷಯವೊಂದರ ಕುರಿತಾಗಿ ಎಲ್ಲರೂ ಯೋಚಿಸುವಂತೆ ಯೋಚಿಸಿ ಬರೆಯುವುದು ಜಾಣತನವಲ್ಲ. ಬದಲಾಗಿ ವಿಷಯವೊಂದನ್ನು ವಿಭಿನ್ನವಾಗಿ, ಬಹುಮುಖವಾಗಿ ಚಿಂತಿಸಿ ಬರೆಯುವುದು ಸೂಕ್ತ.
ಉದಾ: `ಪ್ರತಿಭಾ ಪಲಾಯನ'ದ ಬಗ್ಗೆ ಬರೆಯುವಾಗ ಅದಕ್ಕೆ ಸಮರ್ಥನೀಯ ಕಾರಣಗಳನ್ನು ನೀಡಲು ಪ್ರಯತ್ನಿಸಬೇಕು ಆದರೆ ಸಂಪೂರ್ಣವಾಗಿ ಪೋಷಿಸಿ ಬರೆಯಬಾರದು.

●.ಪ್ರಬಂಧವು ವ್ಯಕ್ತಿನಿಷ್ಠವಾಗಿರಬಾರದು, ವಸ್ತುನಿಷ್ಠವಾಗಿರಬೇಕು.

●.ವಿಶ್ಲೇಷಣೆ ಒಳಗೊಂಡಿರಬೇಕು. ಅಂದರೆ ಒಂದು ವಿಚಾರವನ್ನು ವಿಮರ್ಶಿಸುವಾಗ ಲಭ್ಯವಾಗುವ ಸಣ್ಣಪುಟ್ಟ ವಿವರಗಳನ್ನು ಬಿಡಿಸಿ ಅರ್ಥೈಸಬೇಕು.

●.ವಿಷಯವನ್ನು ಸಂಕುಚಿತ ಮತ್ತು ಸ್ವಾರ್ಥ ಮನೋಭಾವದಿಂದ ಮಂಡಿಸದೇ ವ್ಯಾಪಕ ಪರಿಣಾಮಗಳ ಹಿನ್ನೆಲೆಯಲ್ಲಿ ಮಂಡಿಸಬೇಕು.

●.ಪ್ರಬಂಧದಲ್ಲಿ ಬರೆಯುವ ಪೀಠಿಕೆಯು ಶೀರ್ಷಿಕೆಯ ಹಿನ್ನೆಲೆಯನ್ನು ಬಳಸಿ, ಶೀರ್ಷಿಕೆಯ ಬಗ್ಗೆ ಏನು, ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವಂತಿರಬೇಕು.

●.ಪ್ರಬಂಧ ನಿರೂಪಿಸುವಾಗ ಕೊಡುವ ಹೇಳಿಕೆಗಳು ವೈಚಾರಿಕ ಸ್ಪಷ್ಟತೆಯಿಂದ ಕೂಡಿರಬೇಕು ಮತ್ತು ಸರಿಯಾದ ಆಧಾರಗಳನ್ನು ಹೊಂದಿರಬೇಕು.
ಉದಾ: ದೇಶದಲ್ಲಿ ವರದಕ್ಷಿಣೆ ಸಮಸ್ಯೆ ಇದೆ ಎಂಬುದು ಎಲ್ಲರ ಅನುಭವಕ್ಕೆ ಬಂದಿರುವಂಥದ್ದು. ಆದರೆ ನಿರ್ದಿಷ್ಟ ವ್ಯಕ್ತಿ/ಸಮುದಾಯದ ಬಗ್ಗೆ ಹೇಳುವಾಗ ಆಧಾರವಿರಲೇಬೇಕು.

●.ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ಗಾದೆಮಾತು, ನಾಣ್ಣುಡಿ, ಹೇಳಿಕೆಗಳನ್ನು ಬರೆಯುವುದು ಅಷ್ಟೇನೂ ಪರಿಣಾಮಕಾರಿಯಲ್ಲ. ಒಂದು ವೇಳೆ ಬರೆಯಬೇಕಿದ್ದರೆ ಏನಾದರೂ ವಿಶೇಷ ಅರ್ಥ ನಿರೂಪಿಸಬೇಕು. ಸಾಧ್ಯವಾದಷ್ಟು ಗಮನ ಸೆಳೆಯುವ, ವಿಭಿನ್ನ ಹಾಗೂ ಸಾಕಷ್ಟು ಪ್ರಚಾರದಲ್ಲಿ ಇಲ್ಲದ ಗಾದೆ ಮಾತು, ನಾಣ್ಣುಡಿಗಳನ್ನು ಬರೆಯುವುದೊಳಿತು.

●.ಒಂದು ಪ್ಯಾರಾ ಆದ ಮೇಲೆ ಮತ್ತೊಂದು ಪ್ಯಾರಾ ಆರಂಭಿಸುವಾಗ ಅಲ್ಲಲ್ಲಿ ಉಪಶೀರ್ಷಿಕೆಗಳನ್ನು ಬರೆಯಬೇಕು.

●.ಪ್ರಬಂಧದಲ್ಲಿ ಮುಖ್ಯಾಂಶಗಳಿಗೆ ಅಂಡರ್^ಲೈನ್ ಅಥವಾ ಬೋಲ್ಡ್ ಮಾಡಬಹುದು. ಆದರೆ ಅಂಡರ್^^ಲೈನ್ ಮಾಡಲು ಬೇರೆ ಯಾವುದೇ ಪೆನ್ ಅಥವಾ ಹೈಲೈಟರ್ ಬಳಸಬಾರದು.

●.ಬರವಣಿಗೆ ಸ್ಪಷ್ಟವಾಗಿರಬೇಕು, ಲೇಖನ ಚಿಹ್ನೆಗಳನ್ನು ಬಳಸಬೇಕು.

●.ವಾಕ್ಯರಚನೆ ಉತ್ತಮವಾಗಿರಬೇಕು ಹಾಗೂ ಜೋಡಣೆ ಕ್ರಮವಾಗಿರಬೇಕು.

●.ಪ್ರಬಂಧ ವಿಷಯದ ಎಲ್ಲೆಯನ್ನು ಮೀರಬಾರದು, ಅನಾವಶ್ಯಕವಾಗಿ ಅಪ್ರಸ್ತುತ ವಾಕ್ಯಗಳನ್ನು ಪ್ರಬಂಧಕ್ಕೆ ಎಳೆದು ತರಬಾರದು.

●.ವಾಕ್ಯಗಳು ಮತ್ತು ಅಂಶಗಳು ಪುನರಾವರ್ತನೆಯಾಗದಂತೆ ಎಚ್ಚರವಹಿಸಬೇಕು.
ನಿಗದಿತ ವೇಳೆಯೊಳಗೆ ಪ್ರಬಂಧ ಬರೆದು ಮುಗಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳಿ.


☀ ಪ್ರಬಂಧ ಬರೆಯುವ ಹಂತಗಳು :
•─━━━━━═══════════━━━━━─•

●.ಪ್ರಬಂಧ ಬರೆಯುವ ಕಲೆ ಒಂದೇ ದಿನದಲ್ಲಿ ಸಿದ್ಧಿಸುವಂತಹದಲ್ಲ. ಅದಕ್ಕಾಗಿ ದಿನನಿತ್ಯದ ಅಭ್ಯಾಸ ಅಗತ್ಯ.
ಪ್ರಬಂಧದ ವಿಷಯ ಆಯ್ಕೆ ಮಾಡಿಕೊಳ್ಳಿ.

●.ಆಯ್ಕೆ ಮಾಡಿಕೊಂಡ ವಿಷಯದ ಬಗ್ಗೆ ಏನೆಲ್ಲ ಬರೆಯಬಹುದು ಎಂಬುದನ್ನು ಚಿಂತಿಸಿ.

●.ವಿಷಯಕ್ಕೆ ಸಂಬಂಧಪಟ್ಟ ಮಾಹಿತಿ ಮತ್ತು ವಿವರವನ್ನು ಸಂಗ್ರಹಿಸಿ.

●.ಪ್ರಬಂಧ ಬರೆಯುವ ನಿಯಮಗಳನ್ನು ಅನುಸರಿಸಿ, ವಿಷಯವನ್ನು ನಿರೂಪಿಸಿ, ವಿಶ್ಲೇಷಿಸಿ, ವಿಮರ್ಶಿಸಿ ವ್ಯವಸ್ಥಿತವಾಗಿ ಬರೆಯಿರಿ.

●.ಪ್ರಬಂಧ ಬರೆದು ಮುಗಿಸಿದ ಮೇಲೆ ಕೆಲಹೊತ್ತು ಬಿಟ್ಟು ಮತ್ತೆ ಅದನ್ನು ಆಮೂಲಾಗ್ರವಾಗಿ ಪರಿಶೀಲಿಸಬೇಕು. ಯಾವುದಾದರೂ ವಾಕ್ಯಗಳು, ಶಬ್ದಗಳು ಇಲ್ಲದಿದ್ದರೂ ಪ್ರಬಂಧದ ಅರ್ಥಕ್ಕೆ ಅಥವಾ ತೂಕಕ್ಕೆ ತೊಂದರೆಯಾಗುವುದಿಲ್ಲ ಎನಿಸಿದರೆ ತೆಗೆದು ಹಾಕಿ. ಬಳಸಿದ ಶಬ್ದ/ವಾಕ್ಯಕ್ಕೆ ಬದಲಾಗಿ ಮತ್ತೆ ಯಾವ ಶಬ್ದ/ವಾಕ್ಯ ಬಳಸಿದರೆ, ಇನ್ನೂ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂಬುದನ್ನು ಚಿಂತಿಸಿ ಸೇರ್ಪಡೆಗೊಳಿಸಿ. ಹೀಗೆ ಒಂದು ಪ್ರಬಂಧವನ್ನು 2-3 ಬಾರಿ ಮತ್ತೆ ಮತ್ತೆ ಬರೆಯಿರಿ.

●.ಪ್ರಬಂಧದಲ್ಲಿ ಬಳಸುವ ಭಾಷೆಗ ಬಹಳ ಪ್ರಾಮುಖ್ಯತೆ ಇದೆ. ಕೆಳಮಟ್ಟದ ಪದಗಳು, ಅಶ್ಲೀಲ ಪದಗಳು, ದ್ವಂದಾರ್ಥ ಪದಗಳು, ಅಸಾಂವಿಧಾನಿಕ ಪದಗಳನ್ನು ಬಳಸುವಂತಿಲ್ಲ. ಭಾವತೀವ್ರತೆಯಿಂದ ಬರೆಯಬಾರದು. ಟೀಕೆ ಮಾಡುವುದಾದರೆ ಮೃದುವಾಗಿ ಮಾಡಬೇಕು.

●.ಮಾದರಿ ಪ್ರಬಂಧಗಳ ಅಧ್ಯಯನಕ್ಕಾಗಿ ಗುಣಮಟ್ಟದ ಪುಸ್ತಕಗಳನ್ನು ಓದಿ. ಉದಾ: ಚಾಣಕ್ಯ ಪ್ರಕಾಶನದ ಅರವಿಂದ ಚೊಕ್ಕಾಡಿಯವರ ಪಿ.ಎಸ್.ಐ. ಪ್ರಬಂಧಗಳು, ಕ್ಲಾಸಿಕ್ ಸ್ಟಡಿ ಸರ್ಕಲ್^ನ ಪ್ರಬಂಧಗಳ ಪುಸ್ತಕ, ಸ್ಪರ್ಧಾ ವಿಜೇತ, ಸ್ಪರ್ಧಾ ಚೈತ್ರ ಹಾಗೂ ಇನ್ನಿತರ ಸಂಸ್ಥೆಗಳ ಪುಸ್ತಕಗಳನ್ನು ಪರಾಮರ್ಶಿಸಬಹುದು.

— ಎಲ್ಲಕ್ಕಿಂತ ಮುಖ್ಯವಾಗಿ ಉಳಿದವರೆಲ್ಲರಿಗಿಂತ ಪರಿಣಾಮಕಾರಿಯಾಗಿ ಪ್ರಬಂಧ ಬರೆಯಬಲ್ಲೆ, ವಿಷಯ ನಿರೂಪಿಸಬಲ್ಲೆ ಎಂಬ ಆತ್ಮವಿಶ್ವಾಸ ಇರಬೇಕು. ಇಂಥ ಆತ್ಮವಿಶ್ವಾಸಕ್ಕಾಗಿ ಗಳಿಸುವುದಕ್ಕಾಗಿ ಸತತ ವಿಷಯ ಸಂಗ್ರಹ, ಅಧ್ಯಯನ ಅವಶ್ಯ ಹಾಗೂ ನಿರಂತರವಾಗಿ ಜ್ಞಾನಮುಖಿಯಾಗಿರಬೇಕು.

ಮೂಲ : ಜ್ಞಾನಮುಖಿ

Friday, 14 April 2017

☀ ಕೆ.ಎ.ಎಸ್, ಐ.ಎ.ಎಸ್ ನಾಗರಿಕ ಸೇವಾ ಪರೀಕ್ಷೆಗಳ ಪೂರ್ವ ಸಿದ್ಧತೆ ಕುರಿತ ಸಂಕ್ಷಿಪ್ತ ಮಾಹಿತಿ : (Brief Information of IAS & KAS Civil Services Exams in Kannada)

☀ ಕೆ.ಎ.ಎಸ್, ಐ.ಎ.ಎಸ್ ನಾಗರಿಕ ಸೇವಾ ಪರೀಕ್ಷೆಗಳ ಪೂರ್ವ ಸಿದ್ಧತೆ ಕುರಿತ ಸಂಕ್ಷಿಪ್ತ ಮಾಹಿತಿ :
(Brief Information of IAS & KAS Civil Services Exams in Kannada)
━━━━━━━━━━━━━━━━━━━━━━━━━━━━━━━━━━━━━━━━━━━━━

★ ನಾಗರಿಕ ಸೇವಾ ಪರೀಕ್ಷೆಗಳ ಮಾಹಿತಿ
(Information of Civil Service Exams)

★ ಕೆ.ಎ.ಎಸ್ ಪರೀಕ್ಷೆ
(KAS Examination)


— ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೆ.ಎ.ಎಸ್, ಐ.ಎ.ಎಸ್‌ನಂತಹ ನಾಗರಿಕ ಸೇವಾ ಪರೀಕ್ಷೆಗಳನ್ನು ಎದುರಿಸುವುದು ಕಠಿಣ ಸವಾಲು.ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಪರೀಕ್ಷೆಗಳು ಕಬ್ಬಿಣದ ಕಡಲೆ ಎಂಬ ಮಾತು ಆಗಾಗ್ಗೆ ಕೇಳಿ ಬರುತ್ತಿರುತ್ತದೆ.ಸ್ವಲ್ಪ ಮಟ್ಟಿಗೆ ಇದು ನಿಜವೂ ಹೌದು. ಹಾಗಂತ ಸುಮ್ಮನೆ ಕೂರದೆ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆ ಬರೆದರೆ ಖಂಡಿತಾ ಯಶಸ್ವಿಯಾಗಬಹುದು.

— ಬಹಳಷ್ಟು ಮಂದಿ ಯುವಕರು ಕೆ.ಎ.ಎಸ್, ಐ.ಎ.ಎಸ್ ಅಧಿಕಾರಿಗಳಾಗಬೇಕು ಎಂದು ಕನಸು ಕಾಣುತ್ತಾರೆ. ಆದರೆ ಆ ಕನಸನ್ನು ನನಸು ಮಾಡಿಕೊಳ್ಳುವುದು ಹೇಗೆ ಎಂದು ಬಹಳಷ್ಟು ಮಂದಿಗೆ ಗೊತ್ತಿರುವುದಿಲ್ಲ.ಕೆಲವರು ಸುಮ್ಮನೆ ಕನಸು ಕಾಣುವುದ­ರಲ್ಲಿಯೇ ವಯೋಮಿತಿ ಕಳೆದುಕೊಳ್ಳುತ್ತಾರೆ. ಆದರೆ ಯಶಸ್ವಿಯಾ­ಗಿ­ರುವುದಿಲ್ಲ.ಇದಕ್ಕೆ ಮುಖ್ಯ ಕಾರಣ ಕಠಿಣ ಪರಿಶ್ರಮ, ಸಾಕಷ್ಟು ಪೂರ್ವ ಸಿದ್ಧತೆಯೊಂದಿಗೆ ಪರೀಕ್ಷೆ ಬರೆಯದೆ ಇರುವುದು.

1998ರಿಂದ ಈಚೆಗೆ ಐ.ಎ.ಎಸ್ ಮಾದರಿಯಲ್ಲಿಯೇ ಮೂರು ಹಂತಗಳಲ್ಲಿ ಕೆ.ಎ.ಎಸ್ ಪರೀಕ್ಷೆ ನಡೆಯುತ್ತಿದ್ದು, ಅದರಲ್ಲೂ ಈ ಬಾರಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿ ಐ.ಎ.ಎಸ್ ಪರೀಕ್ಷೆ ತೆಗೆದುಕೊಳ್ಳಲು ಇರುವ ಮಾನದಂಡಗಳನ್ನೇ ಕೆ.ಎ.ಎಸ್ ಪರೀಕ್ಷೆಗೂ ನಿಗದಿಪಡಿಸಲಾಗಿದೆ.


•► ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ :

ಯಾವುದೇ ವಿಷಯದಲ್ಲಿ ಈಗಾಗಲೇ ಪದವಿ ಪಡೆದಿರುವವರು, ಪದವಿಯ ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ­ವರು ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿ­ಗಳಿಗೆ 5 ಬಾರಿ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಏಳು ಬಾರಿ ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ವರ್ಗದವರು ಎಷ್ಟು ಬಾರಿ ಬೇಕಾದರೂ ತೆಗೆದುಕೊಳ್ಳಬಹುದು.


•► ವಯೋಮಿತಿ:

ಸಾಮಾನ್ಯ ವರ್ಗದವರಿಗೆ 35, ಹಿಂದುಳಿದ ವರ್ಗದವರಿಗೆ 38 ಹಾಗೂ ಪರಿಶಿಷ್ಟ ಜಾತಿ/ವರ್ಗದವರಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.


•► ಕೆ.ಎ.ಎಸ್ ಪರೀಕ್ಷೆ ಮೂರು ಹಂತಗಳಲ್ಲಿ ನಡೆಯಲಿದೆ. ಅವುಗಳೆಂದರೆ

1. ಪೂರ್ವಭಾವಿ ಪರೀಕ್ಷೆ,  
2. ಮುಖ್ಯ ಪರೀಕ್ಷೆ    
3. ಸಂದರ್ಶನ.

ಇದು ಎರಡು ಕಡ್ಡಾಯ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿರು­ತ್ತದೆ.

ಮೊದಲನೆಯದು 200 ಅಂಕಗಳ ಸಾಮಾನ್ಯ ಅಧ್ಯಯನ ಪತ್ರಿಕೆ.

ಪ್ರತಿಯೊಂದು ಪತ್ರಿಕೆಗೂ ತಲಾ ಎರಡು ಗಂಟೆಗಳ ಕಾಲಾವಕಾಶ ಇರುತ್ತದೆ.

ಸಾಮಾನ್ಯವಾಗಿ ಎರಡೂ ಪತ್ರಿಕೆಗಳ ಪರೀಕ್ಷೆ ಒಂದೇ ದಿನ ಇರುತ್ತದೆ.

ಪೂರ್ವಭಾವಿ ಪರೀಕ್ಷೆಯು ವಸ್ತುನಿಷ್ಠ/ಬಹು ಆಯ್ಕೆ ಮಾದರಿಯದ್ದಾಗಿರುತ್ತದೆ.

ಪ್ರಶ್ನೆ ಪತ್ರಿಕೆಯಲ್ಲಿ ನೀಡಿರುವ ನಾಲ್ಕು ಉತ್ತರಗಳ ಪೈಕಿ ಸರಿಯಾದ ಉತ್ತರವನ್ನು ಗುರುತಿಸಬೇಕಾಗುತ್ತದೆ.

2014 ರಿಂದ ಪೂರ್ವಭಾವಿ ಪರೀಕ್ಷೆ ಯಲ್ಲಿ ನಕಾರಾತ್ಮಕ ಅಂಕಗಳನ್ನು ನಿಗದಿ ಪಡಿಸಲಾಗಿದೆ.


•► ಪತ್ರಿಕೆ 1: ಸಾಮಾನ್ಯ ಅಧ್ಯಯನ

ಇದು ಸಾಮಾನ್ಯ ವಿಜ್ಞಾನ, ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಪ್ರಾಮುಖ್ಯತೆಯುಳ್ಳ ಪ್ರಚಲಿತ ವಿದ್ಯಮಾನಗಳು, ಭಾರತದ ಚರಿತ್ರೆ,
ಭೂಗೋಳ, ಸಂವಿಧಾನ, ಆರ್ಥಿಕತೆ, ಭಾರತದ ರಾಷ್ಟ್ರೀಯ ಚಳವಳಿ, ಮನೋಸಾಮರ್ಥ್ಯ ಇತ್ಯಾದಿಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಶ್ನೆಪತ್ರಿಕೆ ಇರುತ್ತದೆ. ಅಭ್ಯರ್ಥಿಗಳು ಯಾವುದಾದರೂ ಒಂದು ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ.


•► ಪತ್ರಿಕೆ 2: ಸಾಮಾನ್ಯ ಅಧ್ಯಯನ (CSAT)

ಸಾಮಾನ್ಯ ವಿಜ್ಞಾನ & ತಂತ್ರ ಜ್ಞಾನ, ಮಾನಸಿಕ  ಮಾನಸಿಕ ಸಾಮರ್ಥ್ಯ ಪರೀಕ್ಷೆ ( S S L C Level )


— ಈ ಪೂರ್ವಭಾವಿ ಪರೀಕ್ಷೆಯ ನಂತರ 1:20ರ ಪ್ರಮಾಣದಲ್ಲಿ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಲಾಗುತ್ತದೆ. ಆಗ ಮತ್ತೊಮ್ಮೆಅರ್ಜಿ ಸಲ್ಲಿಸಬೇಕು.

ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸು­ವಾಗ ಪದವಿಯ ಅಂಕಪಟ್ಟಿಗಳನ್ನು ಹೊಂದಿರಬೇಕಾಗಿರು­ತ್ತದೆ.

ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಒಂದು ವೇಳೆ ಪದವಿಯ ಅಂತಿಮ ಸೆಮಿಸ್ಟರ್‌ನಲ್ಲಿ ಉತ್ತೀರ್ಣರಾಗಲು ವಿಫಲ­ರಾದರೆ ಮುಖ್ಯ ಪರೀಕ್ಷೆ ತೆಗೆದುಕೊಳ್ಳಲು ಅನರ್ಹರಾಗುತ್ತಾರೆ.


•► ಮುಖ್ಯ ಪರೀಕ್ಷೆ :
ಇದರಲ್ಲಿ ಒಟ್ಟು ಎಂಟು ಪ್ರಶ್ನೆ ಪತ್ರಿಕೆಗಳು ಇರುತ್ತವೆ.

ಪತ್ರಿಕೆ 1- ಕನ್ನಡ  & ಪ್ರಬಂಧ (100 ಅಂಕ)
ಪತ್ರಿಕೆ 2- ಇಂಗ್ಲಿಷ್ (100 ಅಂಕ)
ಪತ್ರಿಕೆ  3, 4,  5, & 6: ಸಾಮಾನ್ಯ ಅಧ್ಯಯನ, ತಲಾ 250 ಅಂಕಗಳು
ಪತ್ರಿಕೆ 7,8: ಒಂದು ಐಚ್ಛಿಕ ವಿಷಯದಲ್ಲಿ ಎರಡು ಪತ್ರಿಕೆಗಳು (ತಲಾ 250 ಅಂಕಗಳು)

ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಶೇ 35ರಷ್ಟು ಅಂಕಗಳನ್ನು ಗಳಿಸಲೇಬೇಕು. ಒಂದು ವೇಳೆ ನಿಗದಿತ ಅಂಕಗಳನ್ನು ಗಳಿಸದಿದ್ದರೆ ಉಳಿದ ಪತ್ರಿಕೆಗಳ ಮೌಲ್ಯಮಾಪನ ಮಾಡುವುದಿಲ್ಲ. ಆದರೆ ಈ ಅಂಕಗಳನ್ನು ಅಭ್ಯರ್ಥಿಗಳ ಶ್ರೇಯಾಂಕ ನಿಗದಿಗೆ ಪರಿಗಣಿಸುವುದಿಲ್ಲ.

ಇಲ್ಲಿಯೂ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಬರೆಯಲು ಅವಕಾಶ ಇರುತ್ತದೆ.ವಿವರಣಾತ್ಮಕ ರೂಪದ ಪ್ರಶ್ನೆಗಳು ಇರುತ್ತವೆ.

 ಕನ್ನಡ, ಇಂಗ್ಲಿಷ್ ಎಸ್ಸೆಸ್ಸೆಲ್ಸಿ ಮಟ್ಟದ್ದಾಗಿರುತ್ತದೆ.

ಮುಖ್ಯ ಪರೀಕ್ಷೆಯ ಪಠ್ಯಕ್ರಮ ಪದವಿ ಮಟ್ಟದ್ದಾಗಿರುತ್ತದೆ.


•► ಸಂದರ್ಶನ:

ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಒಟ್ಟು ಹುದ್ದೆಗಳು ಹಾಗೂ ಮೀಸಲಾತಿಗೆ ಅನುಗುಣವಾಗಿ 1:3ರ ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.

ಇಲ್ಲಿ ಅಭ್ಯರ್ಥಿಯ ನಾಯಕತ್ವ ಗುಣ, ಮಾನಸಿಕ ಸಮತೋಲನ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಇತ್ಯಾದಿಗಳನ್ನು ಅಳೆಯ­ಲಾ­ಗುತ್ತದೆ.


— ಪೂರ್ವಭಾವಿ ಪರೀಕ್ಷೆಯ ಸಾಮಾನ್ಯ ಅಧ್ಯಯನ ಪ್ರಶ್ನೆಪತ್ರಿಕೆಯ ವ್ಯಾಪ್ತಿ ತುಂಬಾ ವಿಶಾಲವಾಗಿರುತ್ತದೆ.
ಯಾವುದೇ ಒಂದು ಪಠ್ಯಪುಸ್ತಕವನ್ನು ಓದಿ ಪರೀಕ್ಷೆ ಬರೆಯುವುದು ಸಾಧ್ಯವಿಲ್ಲ.
ನಿಯಮಿತವಾಗಿ ಪತ್ರಿಕೆಗಳು, ನಿಯತಕಾಲಿಕೆಗಳನ್ನು ಓದುವುದರ ಜೊತೆಗೆ ಮುಖ್ಯ ಅಂಶಗಳನ್ನು ಪಟ್ಟಿ ಮಾಡಿಕೊಳ್ಳಬೇಕಾಗುತ್ತದೆ.


— ಕನ್ನಡ ಪತ್ರಿಕೆಗಳ ಜೊತೆಗೆ ಒಂದೆರಡು ಇಂಗ್ಲಿಷ್ ಪತ್ರಿಕೆಗಳನ್ನು ಓದುವುದು ಉತ್ತಮ.ಪರೀಕ್ಷೆ ವೇಳೆಗೆ ಮಾರುಕಟ್ಟೆಗೆ ಬರುವ ಪುಸ್ತಕಗಳ ಮೇಲೆ ಅವಲಂಬನೆಯಾಗುವುದು ಬಿಟ್ಟು ಈಗಿನಿಂದಲೇ ಪಠ್ಯಕ್ರಮಕ್ಕೆ ಅನುಗುಣವಾಗಿ 3-4 ಪುಸ್ತಕಗಳನ್ನು ಓದಲು ಶುರು ಮಾಡಿದರೆ ಖಂಡಿತಾ ಯಶಸ್ಸು ಗಳಿಸಬಹುದು.ಕಳೆದ ಒಂದು ವರ್ಷದಿಂದ ಈಚೆಗೆ ನಡೆದಿರುವ ಪ್ರಮುಖ ಬೆಳವಣಿಗೆ­ಗಳು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಬೆಳವಣಿಗೆ, ಪ್ರಮುಖ ನೇಮಕಾತಿಗಳು, ಪುಸ್ತಕಗಳು, ಗಣ್ಯರ ನಿಧನ, ಅವರ ಕೊಡುಗೆ, ಪ್ರಶಸ್ತಿಗಳು, ಕ್ರೀಡಾ ಕ್ಷೇತ್ರದಲ್ಲಿನ ಬೆಳವಣಿಗೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಂಡಿರಬೇಕಾಗುತ್ತದೆ.