"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Wednesday, 27 September 2017

☀️ ಕೆಎಎಸ್ ಮುಖ್ಯ ಪರೀಕ್ಷೆ : ಸ್ಪರ್ಧಾರ್ಥಿಗಳು ಗಮನಿಸಬೇಕಾದ ಅಂಶಗಳು : (KAS Mains Exam : Aspirants Should Know)

☀️ ಕೆಎಎಸ್ ಮುಖ್ಯ ಪರೀಕ್ಷೆ : ಸ್ಪರ್ಧಾರ್ಥಿಗಳು ಗಮನಿಸಬೇಕಾದ ಅಂಶಗಳು :
(KAS Mains Exam : Aspirants Should Know)
━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━

★ ಕೆಎಎಸ್ ಮುಖ್ಯ ಪರೀಕ್ಷೆ ತಯಾರಿ
(Kas mains exam preparation)


1. ಕಡ್ಡಾಯ ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳಲ್ಲಿ ಪಡೆದ ಅಂಕಗಳು ಅರ್ಹತಾದಾಯಕ ಸ್ವರೂಪದ್ದಾಗಿರುತ್ತವೆ. ಅರ್ಹತೆ ಪಡೆಯಲು ಈ ಪ್ರತಿಯೊಂದು ಪತ್ರಿಕೆಯಲ್ಲಿ ಕನಿಷ್ಠ ಶೇಕಡ 35 (52.5) ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಎರಡೂ ಪತ್ರಿಕೆಗಳಲ್ಲಿ ಗಳಿಸಿದ ಅಂಕಗಳನ್ನು ಅಭ್ಯರ್ಥಿಗಳ ಆಯ್ಕೆಯ ಅರ್ಹತೆಯನ್ನು ನಿಗದಿಪಡಿಸುವಲ್ಲಿ ಪರಿಗಣಿಸಲಾಗುವುದಿಲ್ಲ. ಈ ಎರಡು ಪತ್ರಿಕೆಗಳಲ್ಲಿ ನಿಗದಿತ ಅಂಕಗಳನ್ನು ಗಳಿಸದ ಅಭ್ಯರ್ಥಿಗಳು ಇತರೆ ಪತ್ರಿಕೆಗಳಲ್ಲಿ ಎಷ್ಟೇ ಹೆಚ್ಚು ಅಂಕಗಳನ್ನು ಗಳಿಸಿದ್ದರೂ ವ್ಯಕ್ತಿತ್ವ ಪರೀಕ್ಷೆಗೆ ಮತ್ತು ಆಯ್ಕೆಗೆ ಅರ್ಹರಾಗುವುದಿಲ್ಲ ಹಾಗೂ ಇಂತಹ ಅಭ್ಯರ್ಥಿಗಳ ಇತರೆ ವಿಷಯಗಳಲ್ಲಿ ಪಡೆದ ಅಂಕಗಳನ್ನು ಪ್ರಕಟಿಸುವುದಿಲ್ಲ.

2.ಮುಖ್ಯ ಪರೀಕ್ಷೆಯು ವಿವರಣಾತ್ಮಕ ಮಾದರಿಯಲ್ಲಿರುತ್ತದೆ ಮತ್ತು ಎಲ್ಲಾ ಪತ್ರಿಕೆಗಳು ಕಡ್ಡಾಯವಾಗಿರುತ್ತವೆ.

3.ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳೆರಡರಲ್ಲೂ ಮುದ್ರಿಸಲಾಗಿರುತ್ತದೆ. ಅಭ್ಯರ್ಥಿಗಳು ಪತ್ರಿಕೆಯ ಉತ್ತರಗಳನ್ನು ಸಂಪೂರ್ಣವಾಗಿ ಕನ್ನಡ ಅಥವಾ ಆಂಗ್ಲಭಾಷಾ ಮಾಧ್ಯಮದಲ್ಲಿಯೇ ಉತ್ತರಿಸತಕ್ಕದ್ದು.

4.ಮುಖ್ಯ ಪರೀಕ್ಷೆಯ ಕಡ್ಡಾಯ ಕನ್ನಡ ಹಾಗೂ ಕಡ್ಡಾಯ ಆಂಗ್ಲಭಾಷೆ ಪತ್ರಿಕೆಗಳನ್ನು ಹೊರತುಪಡಿಸಿ ಉಳಿದ ಪತ್ರಿಕೆಗಳು ಪದವಿ ಮಟ್ಟದ್ದಾಗಿರುತ್ತದೆ. ಕಡ್ಡಾಯ ಕನ್ನಡ ಹಾಗೂ ಕಡ್ಡಾಯ ಆಂಗ್ಲಭಾಷೆ ಪತ್ರಿಕೆಗಳು ಎಸ್.ಎಸ್.ಎಲ್.ಸಿಯ ಪ್ರಥಮ ಭಾಷೆಯ ಮಟ್ಟದ್ದಾಗಿರುತ್ತದೆ.

5.ಎಲ್ಲಾ 07 ಪತ್ರಿಕೆಗಳು ಕಡ್ಡಾಯ ಪತ್ರಿಕೆಗಳಾಗಿರುತ್ತವೆ. ಪತ್ರಿಕೆ- (02) ರಿಂದ (05)ರವರೆಗಿನ ಪತ್ರಿಕೆಗಳು ಮೂರು ಭಾಗಗಳನ್ನು ಒಳಗೊಂಡಿರುತ್ತದೆ. ಪ್ರತಿ ಪತ್ರಿಕೆಯು ಗರಿಷ್ಠ 250 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು 03 ಗಂಟೆಗಳ ಅವಧಿಯದ್ದಾಗಿರುತ್ತದೆ.
ಲಿಖಿತ ಮತ್ತು ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು ಅಂತಿಮ ಆಯ್ಕೆಪಟ್ಟಿಯೊಂದಿಗೆ ಪ್ರಕಟಿಸಲಾಗುವುದು. @spardhaloka

No comments:

Post a Comment