"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Wednesday, 27 September 2017

☀ ಕೆಎಎಸ್ ಮುಖ್ಯ ಪರೀಕ್ಷೆ: ಲಿಖಿತ ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ವಿವರಗಳು : (KAS Mains Exam: Details of Question Papers and Written Exam )

☀ ಕೆಎಎಸ್ ಮುಖ್ಯ ಪರೀಕ್ಷೆ: ಲಿಖಿತ ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ವಿವರಗಳು :
(KAS Mains Exam: Details of Question Papers and Written Exam )
━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━

★ ಕೆಎಎಸ್ ಮುಖ್ಯ ಪರೀಕ್ಷೆ ವಿವರ
(Kas Mains Exam Details)


ಇತ್ತೀಚೆಗೆ 2015 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅಧಿಸೂಚನೆ ಹೊರಡಿಸಿದೆ.

ಪ್ರಿಲಿಮ್ಸ್ ನಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹರಾಗಿದ್ದು, ಅಕ್ಟೋಬರ್ 16 ರೊಳಗೆ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

ಮುಖ್ಯ ಪರೀಕ್ಷೆಯು 2017 ರ ನವೆಂಬರ್ ತಿಂಗಳ ಕೊನೆಯ ವಾರ ಹಾಗೂ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ವೇಳಾ ಪಟ್ಟಿಯನ್ನು ಶೀಘ್ರದಲ್ಲೇ ಕೆಪಿಎಸ್ಸಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.



●.ಕೆಎಎಸ್ ಮುಖ್ಯ ಪರೀಕ್ಷೆ
━━━━━━━━━━━━━━━

✧.ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಗೆ ನಡೆಯುವ ಮುಖ್ಯ ಪರೀಕ್ಷೆಯು ವಿವರಣಾತ್ಮಕ ಮಾದರಿಯಲ್ಲಿದ್ದು, ಎಲ್ಲಾ ಪತ್ರಿಕೆಗಳು ಕಡ್ಡಾಯವಾಗಿರುತ್ತದೆ.

✧.ಮುಖ್ಯ ಪರೀಕ್ಷೆಯು ಅರ್ಹತಾದಾಯಕ ಮತ್ತು ಕಡ್ಡಾಯ ಪತ್ರಿಕೆಗಳನ್ನು ಒಳಗೊಂಡಿರುತ್ತದೆ. 300 ಅಂಕಗಳ ಅರ್ಹತಾದಾಯಕ ಪತ್ರಿಕೆಗಳು ಮತ್ತು 1750 ಅಂಕಗಳ ಕಡ್ಡಾಯ ಪತ್ರಿಕೆಗಳಿಗೆ ಅಭ್ಯರ್ಥಿಯು ಉತ್ತರಿಸಬೇಕಾಗುತ್ತದೆ.


✧.ಕಡ್ಡಾಯ ಕನ್ನಡ ಮತ್ತು ಕಡ್ಡಾಯ ಇಂಗ್ಲಿಷ್ ಪತ್ರಿಕೆಗಳಲ್ಲಿ ಪಡೆಎದ ಅಂಕಗಳು ಅರ್ಹತಾದಾಯಕ ಸ್ವರೂಪದ್ದಾಗಿರುತ್ತದೆ. ಅರ್ಹತೆ ಪಡೆಯಲು ಈ ಪತ್ರಿಯೊಂದು ಪತ್ರಿಕೆಯಲ್ಲಿ ಕನಿಷ್ಠ ಶೇ.35 ಅಂಕಗಳು, ಅಂದರೆ 52.5 ಅಂಕಗಳನ್ನು ನಿಗದಿಪಡಿಸಲಾಗಿರುತ್ತದೆ.

✧.ಈ ಎರಡೂ ಪತ್ರಿಕೆಗಳಲ್ಲಿ ಗಳಿಸಿದ ಅಂಕಗಳನ್ನು ಅಭ್ಯರ್ಥಿಗಳ ಆಯ್ಕೆಯ ಅರ್ಹತೆಯನ್ನು ನಿಗದಿಪಡಿಸುವಲ್ಲಿ ಪರಿಗಣಿಸಲಾಗುವುದಿಲ್ಲ.


●.ಕೆಎಎಸ್ ಮುಖ್ಯ ಪರೀಕ್ಷೆಯ ವಿವರಗಳು
━━━━━━━━━━━━━━━━━━━━━━━

✧.ಈ ಎರಡೂ ಪತ್ರಿಕೆಗಳಲ್ಲಿ ನಿಗದಿತ ಅಂಕಗಳನ್ನು ಗಳಿಸದ ಅಭ್ಯರ್ಥಿಗಳು ಇತರೆ ಪತ್ರಿಕೆಗಳಲ್ಲಿ ಎಷ್ಟೇ ಹೆಚ್ಚು ಅಂಕಗಳನ್ನು ಗಳಿಸಿದ್ದರೂ ವ್ಯಕ್ತಿತ್ವ ಪರೀಕ್ಷೆಗೆ ಮತ್ತು ಆಯ್ಕೆಗೆ ಅರ್ಹರಾಗುವುದಿಲ್ಲ ಹಾಗೂ ಇಂತಹ ಅಭ್ಯರ್ಥಿಗಳ ಇತರೆ ವಿಷಯಗಳಲ್ಲಿ ಪಡೆದ ಅಂಕಗಳನ್ನು ಪ್ರಕಟಿಸಲಾಗುವುದಿಲ್ಲ.

✧.ಮುಖ್ಯ ಪರೀಕ್ಷೆಯ ಕಡ್ಡಾಯ ಕನ್ನಡ ಪತ್ರಿಕೆ ಮತ್ತು ಕಡ್ಡಾಯ ಇಂಗ್ಲಿಷ್ ಪತ್ರಿಕೆ ಎಸ್ ಎಸ್ ಎಲ್ ಸಿ ಯ ಪ್ರಥಮ ಭಾಷೆಯ ಮಟ್ಟದ್ದಾಗಿರುತ್ತದೆ.

✧.ಮುಖ್ಯ ಪತ್ರಿಕೆಯ ಇನ್ನಿತರ ವಿಷಯಗಳ ಪತ್ರಿಕೆಗಳು ಪದವಿ ಮಟ್ಟದ್ದಾಗಿರುತ್ತದೆ.

✧.ಪ್ರಶ್ನೆಪತ್ರಿಕೆಗಳು ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಮುದ್ರಿಸಲಾಗಿರುತ್ತದೆ. ಅಭ್ಯರ್ಥಿಗಳು ಪತ್ರಿಕೆಯ ಉತ್ತರಗಳನ್ನು ಸಂಪೂರ್ಣವಾಗಿ ಕನ್ನಡ ಅಥವಾ ಆಂಗ್ಲಭಾಷಾ ಮಾಧ್ಯಮದಲ್ಲಿ ಉತ್ತರಿಸತಕ್ಕದ್ದು. (ಅರ್ಜಿಯಲ್ಲಿ ಆಯ್ಕೆ ಮಾಡಿಕೊಂಡ ಭಾಷೆಯಲ್ಲೇ ಉತ್ತರಿಸತಕ್ಕದ್ದು)

✧.ಕನ್ನಡ ಭಾಷೆಯಲ್ಲಿರುವ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರು ಅಸ್ಪಷ್ಟತೆ ಇದ್ದಲ್ಲಿ ಆಂಗ್ಲ ಭಾಷೆಯಲ್ಲಿರುವ ಪ್ರಶ್ನೆಗಳನ್ನು ನೋಡುವುದು. ಎಲ್ಲಾ ವಿಷಯಗಳಲ್ಲಿ ಆಂಗ್ಲ ಭಾಷೆಯ ಪ್ರಶ್ನೆಗಳು ಅಂತಿಮವಾಗಿರುತ್ತದೆ.

✧.ಆಯ್ಕೆ ಮಾಡಿಕೊಂಡ ಮಾಧ್ಯಮವನ್ನು ಬದಲಾಯಿಸಿದಲ್ಲಿ ಅಥವಾ ಅರ್ಧ ಕನ್ನಡ ಹಾಗೂ ಅರ್ಧ ಆಂಗ್ಲ ಮಾಧ್ಯಮದಲ್ಲಿ ಉತ್ತರಿಸಿದಲ್ಲಿ ಅಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಗೊಳಿಸುವುದಿಲ್ಲ.
ಮುಖ್ಯ ಪರೀಕ್ಷೆಯನ್ನು ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ.

(Courtesy : careerindia)

No comments:

Post a Comment