"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Sunday 5 July 2020

•► 'ಕೌಶಲ್ಯ ಸಂಪರ್ಕ ವೇದಿಕೆ': (Skill connect Portal)

•► 'ಕೌಶಲ್ಯ ಸಂಪರ್ಕ ವೇದಿಕೆ':
(Skill connect Portal)
━━━━━━━━━━━━━━

★ ಕರ್ನಾಟಕ ಆರ್ಥಿಕ ವ್ಯವಸ್ಥೆ
(Karnataka Economic System)

★ ಕರ್ನಾಟಕ ಸರ್ಕಾರದ ಕಾರ್ಯಕ್ರಮಗಳು
(Karnataka Govt Programs)


ಕರ್ನಾಟಕ ಸರಕಾರವು ಕೌಶಲ್ಯಾಭಿವೃದ್ಧಿ ನಿಗಮದ ಮೂಲಕ ಖಾಸಗಿ ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳನ್ನು ಒಂದೇ ವೇದಿಕೆಗೆ ತಂದು ನಿರುದ್ಯೋಗ ನಿವಾರಿಸುವ ಗುರಿಯೊಂದಿಗೆ ‘ಕೌಶಲ್ಯ ಸಂಪರ್ಕ ವೇದಿಕೆ’ ಪೋರ್ಟಲ್‌ ರೂಪಿಸಿದೆ.

ಕೋವಿಡ್ 19 ನಂತರದ ಕಾಲದಲ್ಲಿ ರಾಜ್ಯದಲ್ಲಿ ಕುಂಠಿತಗೊಂಡಿರುವ ಆರ್ಥಿಕ, ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉದ್ಯೋಗಾವಕಾಶ ಸೃಷ್ಟಿಸುವ ಹಾಗೂ ವಲಸೆ ಕಾರ್ಮಿಕರಿಗೆ ಉದ್ಯೋಗಾವಕಾಶ ಸೃಷ್ಟಿಸುವುದರೊಂದಿಗೆ ಅವರಿಗೆ ಸೂಕ್ತ ತರಬೇತಿ ನೀಡುವ ಸರಕಾರದ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ.

ಎಲ್ಲೆಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ, ಯಾರಿಗೆ ಕೆಲಸದ ಅಗತ್ಯವಿದೆ ಎಂಬ ಮಾಹಿತಿ ಈ ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ. ಆ ಮೂಲಕ ಲಭ್ಯವಿರುವ ಉದ್ಯೋಗಗಳಿಗೆ ಅಗತ್ಯವಾದ ತರಬೇತಿಯನ್ನು ನೀಡಿ ಆ ಅಭ್ಯರ್ಥಿಗಳನ್ನು ಕೌಶಲಗೊಳಿಸಿ ಸಂಬಂಧಿತ ಕಂಪನಿಗೆ ಕಳಿಸಲಾಗುವುದು.

ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಖಚಿತವಾಗಿ ಕೆಲಸ ನೀಡುವುದರೊಂದಿಗೆ ಕಂಪನಿಗಳಿಗೂ ಈ ಸಂಪರ್ಕ ವೇದಿಕೆ ಮೂಲಕ ಉತ್ತಮ ಗುಣಮಟ್ಟದ ಕೌಶಲಪೂರ್ಣ ಮಾನವ ಸಂಪನ್ಮೂಲ ದೊರೆಯುತ್ತದೆ.

• ಮಾಹಿತಿ, ಸಂಪರ್ಕದ ಸೇತುವೆ
━━━━━━━━━━━━━
ಈ ಹಿಂದೆ ಎಲ್ಲಿ ಉದ್ಯೋಗ ಲಭ್ಯವಿದೆ ಎಂಬ ಮಾಹಿತಿ ಸಿಗುತ್ತಿರಲಿಲ್ಲ. ಹಾಗೆಯೇ, ಉದ್ಯೋಗದಾತರಿಗೂ ಎಲ್ಲಿ ಕೌಶಲಪೂರ್ಣ ಉದ್ಯೋಗಿಗಳು ಸಿಗುತ್ತಾರೆಂಬುದು ಗೊತ್ತಾಗುತ್ತಿರಲಿಲ್ಲ. ಜಾಬ್ ಮಾರುಕಟ್ಟೆಯ ಬೇಡಿಕೆಯನ್ನು ಗಮನಿಸದೇ ತರಬೇತಿ ನೀಡುವ ಅವೈಜ್ಞಾನಿಕ ಪದ್ಧತಿ ಇತ್ತು. ಈಗ ಅಂಥ ವ್ಯವಸ್ಥೆಗೆ ಸಂಪೂರ್ಣವಾಗಿ ಹೋಗಲಾಡಿಸುವುದೇ ಈ ‘ಕೌಶಲ್ಯ ಸಂಪರ್ಕ ವೇದಿಕೆ’ ಪೋರ್ಟಲ್ ನ ಉದ್ದೇಶ.

ಸರಕಾರವು ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳಲಿದೆ. ಅವರ ಬೇಡಿಕೆಗೆ ತಕ್ಕಂತೆ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಕಳಿಸಲಾಗುವುದು.

• ಪೋರ್ಟಲ್ ಹೇಗೆ ಕೆಲಸ ಮಾಡುತ್ತದೆ?
━━━━━━━━━━━━━━━━
ಇದು ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳ ಸಂಪರ್ಕ ಕೊಂಡಿ. ಇದರ ಮೂಲಕ ಕಂಪನಿಗಳು ತಮಗೆ ಅಗತ್ಯವಿರುವ ಮಾನವ ಸಂಪನ್ಮೂಲದ ಬಗ್ಗೆ ಬೇಡಿಕೆ ಇಡಬಹುದು. ಅದರನ್ವಯ ಉದ್ಯೋಗಾಂಕ್ಷಿಗಳು ತಮ್ಮ ವಿದ್ಯಾರ್ಹತೆ, ಕೌಶಲಕ್ಕೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು. ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ತಂತ್ರಾಂಶವನ್ನು ಬಳಸಿ ಉದ್ಯೋಗಿಗಳನ್ನು ಪೋರ್ಟಲ್ ಹೊಂದಾಣಿಕೆ ಮಾಡಲಿದೆ.

ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ದಿ ನಿಗಮ ಸೂಕ್ತ ತರಬೇತಿ ನೀಡುತ್ತದೆ. ಇದು ಉದ್ಯೋಗಿಗಳಿಗೆ ಅನುಕೂಲವಾಗಿರುತ್ತದೆ. ಜಾಬ್ ಮಾರುಕಟ್ಟೆಗೆ ಬೇಡಿಕೆ ಅನುಗುಣವಾಗಿ ಯುವಕರು ಕೆಲಸ ಹುಡುಕುವುದು ಸುಲಭ. ಅಂಗೈಯಲ್ಲಿ ಎಲ್ಲ ಮಾಹಿತಯೂ ಅವರಿಗೆ ಸಿಗಲಿದೆ.

ಅದೇ ರೀತಿ ಈ ಪೋರ್ಟಲ್ ಮೂಲಕ ಕಂಪನಿಗಳು ಕೂಡ ಆಕಾಂಕ್ಷಿಗಳ ಮಾಹಿತಿಯನ್ನು ನೋಡಬಹುದು. ತಮಗೆ ಸೂಕ್ತವೆನಿದರೆ ನೇರ ಸಂದರ್ಶನಕ್ಕೆ ಕರೆಯಬಹುದು. ಇಲ್ಲವೇ ತಮಗೆ ಅಗತ್ಯವಾದ ಮಾನವ ಸಂಪನ್ಮೂಲದ ಬಗ್ಗೆ ಕೌಶಲ್ಯಾಭಿವೃದ್ಧಿ ನಿಗಮಕ್ಕೆ ಕೋರಿಕೆ ಸಲ್ಲಿಸಬಹುದು. ಅದೇ ರೀತಿ ಅಭ್ಯರ್ಥಿಗಳು ಕೂಡ ತಮಗೆ ಸೂಕ್ತವಾದ ಉದ್ಯೋಗಗಳನ್ನು ಹುಡುಕಿಕೊಳ್ಳಬಹುದು. ಜತೆಗೆ ತಮ್ಮ ಸಾಮರ್ಥ್ಯದ ಮೌಲ್ಯಮಾಪನವನ್ನೂ ಮಾಡಿಕೊಳ್ಳಬಹುದು.

• ಪೋರ್ಟಲ್ ವಿಳಾಸ:
━━━━━━━━━
 https://skillconnect.kaushalkar.com

No comments:

Post a Comment