•► 2022ನೇ ಸಾಲಿನ IAS, IPS ಹುದ್ದೆಗಳ ನಾಗರಿಕ ಸೇವಾ ಪರೀಕ್ಷೆಗೆ ಅರ್ಜಿ ಆಹ್ವಾನ :
(UPSC Civil Services Exam 2022, CSE Notification)
━━━━━━━━━━━━━━━━━━━━━━━━━━━━━━
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2022ನೇ ಸಾಲಿನ ಐಎಎಸ್, ಐಪಿಎಸ್ ಸೇರಿದಂತೆ ಇನ್ನಿತರ ಹುದ್ದೆಗಳ ನಾಗರಿಕ ಸೇವಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರುವರಿ 22 ಕೊನೆಯ ದಿನವಾಗಿದೆ. ಪೂರ್ವಭಾವಿ ಪರೀಕ್ಷೆ ಜೂನ್ ಹಾಗೂ ಮುಖ್ಯ ಪರೀಕ್ಷೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ.
ಹುದ್ದೆಗಳ ಸಂಖ್ಯೆ
ಐಎಎಸ್: 861 ( ಸಂಭಾವ್ಯ)
ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು. ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ವಯಸ್ಸು
*ಕನಿಷ್ಠ 21 ವರ್ಷಗಳಾಗಿರಬೇಕು.
ವಯೋಮಿತಿ ಸಡಿಲಿಕೆ
* ಸಾಮಾನ್ಯ ವರ್ಗದ ಅಭ್ಯರ್ಥಿಗಳು– ಗರಿಷ್ಠ 32 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ
* ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 37 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ –42 ವರ್ಷಗಳು
ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹ 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ನೇಮಕಾತಿ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್ ಅನ್ನು ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ
* ಲೋಕಸೇವಾ ಆಯೋಗದ ವೆಬ್‌ಸೈಟ್ https://upsc.gov.in ಗೆ ಲಾಗಿನ್ ಆಗಿ ಅನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.
* ಆನ್‌ಲೈನ್ ಅರ್ಜಿಯನ್ನು ಎರಡು ಹಂತಗಳಲ್ಲಿ ಭರ್ತಿ ಮಾಡಬೇಕು.
ಮುಖ್ಯ ಮಾಹಿತಿ
* ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 22-02-2022
* ಅಧಿಸೂಚನೆ ಲಿಂಕ್: https://www.upsc.gov.in/sites/default/files/Notif-CSP-22-engl-020222F.pdf
* ಯುಪಿಎಸ್‌ಸಿ ವೆಬ್‌ಸೈಟ್: https://upsc.gov.in
(Courtesy : ಪ್ರಜಾವಾಣಿ)
No comments:
Post a Comment